ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 21 ದಿನ ಹೋಂ ಸ್ಟೇ, ರೆಸಾರ್ಟ್‌ ಬಂದ್

ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಕೋವಿಡ್ 19‌ ಪ್ರಕರಣ
Last Updated 25 ಜೂನ್ 2020, 10:17 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಜಿಲ್ಲಾ ಹೋಟೆಲ್‌, ರೆಸಾರ್ಟ್‌ ಹಾಗೂ ಹೋಂ ಸ್ಟೇಗಳಲ್ಲಿ ಪ್ರವಾಸಿಗರಿಗೆ ವಾಸ್ತವ್ಯ ಕಲ್ಪಿಸದಿರಲು ತೀರ್ಮಾನಿಸಲಾಗಿದೆ.

ಸರ್ಕಾರ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಿದ್ದರೂ, ಜಿಲ್ಲೆಯ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಪ್ರವಾಸಿಗರಿಗೆ ವಾಸ್ತವ್ಯ ಒದಗಿಸದೇ ಇರಲು ತೀರ್ಮಾನಿಸಿದ್ದು ಸಂಸ್ಥೆಗಳ ಸದಸ್ಯರು ತೀರ್ಮಾನಕ್ಕೆ ಕೈಜೋಡಿಸುವಂತೆ ಜಿಲ್ಲಾ ಹೋಟೆಲ್‌, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಹಾಗೂ ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ಬಿ.ಜಿ.ಅನಂತಶಯನ ಮನವಿ ಮಾಡಿದ್ದಾರೆ.

ಜೂನ್ 8ರಿಂದ ಪ್ರವಾಸೋದ್ಯಮ ಕ್ಷೇತ್ರವನ್ನು ತೆರೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಮತಿ ನೀಡಿದ್ದರೂ, ಜಿಲ್ಲೆಯಲ್ಲಿ ಶೇ 98ರಷ್ಟು ರೆಸಾರ್ಟ್, ವಸತಿಗೃಹಗಳು ಹಾಗೂ ಹೋಂಸ್ಟೇಗಳು ಕಾರ್ಯನಿರ್ವಹಿಸದೆ ಜನತೆಯ ಭಾವನೆಗಳಿಗೆ ಬೆಲೆ ಕೊಟ್ಟಿದ್ದವು. ಕಾನೂನಾತ್ಮಕವಾಗಿ ತಮ್ಮ ವೃತ್ತಿಯನ್ನು ಮುಂದುವರಿಸಬಹುದಾದರೂ ಜಿಲ್ಲೆಯ ಜನರ ಆರೋಗ್ಯ ಹಾಗೂ ಭಾವನೆಗಳಿಗೆ ಸಂಸ್ಥೆಯ ಪದಾಧಿಕಾರಿಗಳು ಗೌರವ ನೀಡಿ ಮೇಲಿನ ತೀರ್ಮಾನ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ನೋಂದಾಯಿತ ಸಂಸ್ಥೆಗಳು ಮುಚ್ಚಲ್ಪಟ್ಟರೂ, ಅನಧಿಕೃತ ಹೋಂಸ್ಟೇ ಹಾಗೂ ವಸತಿಗೃಹಗಳು ಅತಿಥಿಗಳಿಗೆ ವಾಸ್ತವ್ಯ ನೀಡಿದರೆ ಆಯಾ ಊರಿನ ನಾಗರಿಕರು ಜಿಲ್ಲಾಡಳಿತದ ಗಮನ ಸೆಳೆಯುವಂತೆಯೂ ಮನವಿ ಮಾಡಿದ್ದಾರೆ. ಪ್ರವಾಸೋದ್ಯಮ ಇಲಾಖೆ ಕೂಡ ಈ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.

ವಾಸ್ತವ್ಯ ಕೇಂದ್ರಗಳು ಮುಂದಿನ 21 ದಿನಗಳವರೆಗೆ ಮುಚ್ಚಲ್ಪಟ್ಟರೂ ಕೂಡ ಸರ್ಕಾರ ಅನುಮತಿ ನೀಡಿರುವ ರೆಸ್ಟೋರೆಂಟ್‌ಗಳು ಎಂದಿನಂತೆ ಸರ್ಕಾರ ನಿಯಮಗಳನ್ನು ಪಾಲಿಸಿ ಕಾರ್ಯ ನಿರ್ವಹಿಸಲಿವೆ ಎಂದು ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದ್ದಾರೆ. .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT