ಮಡಿಕೇರಿ: ಮನೆಗೆ ನುಗ್ಗಿ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿದ್ದ ನೇಪಾಳ ಮೂಲದ ನಾಲ್ವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಇವರು 2022ರ ಜನವರಿ 31ರಂದು ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಮೂಟೇರಿ ಎಂಬಲ್ಲಿ ವಿ.ಜಿ.ಜಾನಕಿ, ವಿ.ಜಿ.ಅಮ್ಮಕ್ಕಿ ಅವರ ಮನೆಗೆ ರಾತ್ರಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ, ₹ 2.50 ಲಕ್ಷ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದರು.
ಪ್ರಕರಣ ದಾಖಲಿಸಿಕೊಂಡ ಸಿಪಿಐ ಅನೂಪ್ ಮಾದಪ್ಪ ಅವರು ಅಪರಾಧಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಹೊಸಮನಿ ಪುಂಡಲಿಕ ಅವರು ಅಪರಾಧಿಗಳಿಗೆ 3 ವರ್ಷ ಕಠಿಣ ಶಿಕ್ಷೆ ವಿಧಿಸಿದರು.