ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರಂಗಿಯಿಂದ 30 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

Last Updated 10 ಜುಲೈ 2022, 6:52 IST
ಅಕ್ಷರ ಗಾತ್ರ

ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಜಲಾಶಯದಿಂದ 30 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬೇಡಲಾಗುತ್ತಿದೆ ಎಂದು ನೀರಾವರಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.

ಕೆಳ ಸೇತುವೆ ಮುಳಿಗಡೆ: ಜಲಾಶಯದಿಂದ ಅತೀ ಹೆಚ್ಚಿನ ನೀರನ್ನು ನದಿಗೆ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕೆಳಸೇತುವೆ ಸಂಪೂರ್ಣ ಮುಳುಗಡೆಗೊಂಡಿದ್ದು, ಸಂಚಾರ ಬಂದ್ ಆಗಿದೆ. ಅಕ್ಕಪಕ್ಕದ ಹಳ್ಳಿಗಳಿಗೆ ಸಮರ್ಪಕ ಕಡಿತಗೊಂಡಿದೆ. ಇದರಿಂದ ಹತ್ತಾರು ಹಳ್ಳಿಗಳ ಜನರಿಗೆ, ಕಾರ್ಮಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಈ ಗ್ರಾಮಗಳ ಜನರು ಇದೀಗ ಹತ್ತಾರು ಕಿಲೋಮೀಟರ್ ದೂರ ಕ್ರಮಿಸಿ ತಮ್ಮ ಮನೆಗಳಿಗೆ ತಲುಪಬೇಕಿದೆ.

ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ: ಪ್ರತಿವರ್ಷ ಮಳೆಗಾಲದಲ್ಲಿ ಜಲಾಶಯದಿಂದ ನೀರು ನದಿಗೆ ಹರಿಬಿಟ್ಟ ಸಂದರ್ಭ ಕೆಳಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎತ್ತರವಾದ ನೂತನ ಸೇತುವೆಯ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT