ಮಂಗಳವಾರ, ಫೆಬ್ರವರಿ 18, 2020
20 °C

ಕೊಡಗು| ಜ.31ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಕೊಡಗಿನ ಗಡಿಭಾಗ ನಿಡ್ತ ಗ್ರಾಮದಲ್ಲಿ ಜ.31 ಹಾಗೂ ಫೆ.1ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ನಗರದ ಸಾಹಿತ್ಯ ಪರಿಷತ್‌ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮೆರವಣಿಗೆ, ಕವಿಗೋಷ್ಠಿ, ವಿಚಾರಗೋಷ್ಠಿ, ಗೀತಗಾಯನ, ಸಾಂಸ್ಕೃತಿಕ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ಗ್ರಾಮೀಣ ಜನಪದ ಆಟೋಟ ಸ್ಪರ್ಧೆ ಏರ್ಪಡಿಸುವ ಕುರಿತು ತೀರ್ಮಾನಿಸಲಾಯಿತು.

ರಸಪ್ರಶ್ನೆ ಸ್ಪರ್ಧೆ: ರಾಷ್ಟ್ರಕವಿ ಕುವೆಂಪು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಕುವೆಂಪು ಅವರ ಬದುಕು ಬರಹ’ ಕುರಿತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲು ತೀರ್ಮಾನಿಸಲಾಯಿತು.

ಪ್ರತಿ ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಈ ನಿಟ್ಟಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸುವ ಕುರಿತು ನಿರ್ಧರಿಸಲಾಯಿತು.

ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ಎನ್.ಎ.ಅಶ್ವತ್ಥ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ಸಮಿತಿ ನಿರ್ದೇಶಕರಾದ ಪ್ರಸನ್ನ, ಪಿಲಿಫ್ ವಾಸ್, ಲೋಕನಾಥ್ ಅಮೆಚೂರ್ ಹಾಜರಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು