ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ: 45 ಲೀಟರ್ ಅಕ್ರಮ ಕಳ್ಳಬಟ್ಟಿ ವಶ

Published : 6 ಆಗಸ್ಟ್ 2024, 15:15 IST
Last Updated : 6 ಆಗಸ್ಟ್ 2024, 15:15 IST
ಫಾಲೋ ಮಾಡಿ
Comments

ಸೋಮವಾರಪೇಟೆ: ತಾಲ್ಲೂಕಿನ ಹಿತ್ಲುಗದ್ದೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಕಳ್ಳಬಟ್ಟಿ ಮತ್ತು ಪುಳಗಂಜಿಯನ್ನು ಅಬಕಾರಿ ಇಲಾಖೆಯವರು ಮಂಗಳವಾರ ದಾಳಿ ನಡೆಸಿ ವಶಕ್ಕೆ ಪಡೆದರು.

ಗ್ರಾಮದ ತೀರ್ಥಕುಮಾರ್ ಅವರ ಮನೆಯಲ್ಲಿ ಸಂಗ್ರಹಿಸಿದ್ದ ಸುಮಾರು 45 ಲೀಟರ್ ಕಳ್ಳಬಟ್ಟಿ ಸರಾಯಿ, 180 ಲೀಟರ್ ಬೆಲ್ಲದ ಪುಳಗಂಜಿ ಮತ್ತು ಕಳ್ಳಬಟ್ಟಿ ತಯಾರಿಸಲು ಬಳಸುತ್ತಿದ್ದ ಪರಿಕರಗಳನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.

ಅಬಕಾರಿ ಇಲಾಖೆಯ ಉಪ ಅಧೀಕ್ಷಕಿ ಆರ್.ಎಂ. ಚೈತ್ರಾ, ಉಪ ನಿರೀಕ್ಷಕಿ ಕೆ.ವಿ. ಸುಮತಿ ಮಹದೇವ್, ಕಾಂತರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT