ಮಡಿಕೇರಿ: ‘ಎಮ್ಮೆಮಾಡು ಗ್ರಾಮದ ಪಾಡಿಯಾಣಿ ಕ್ಷೇತ್ರದ ಅಭಿವೃದ್ಧಿಗೆ ಸೂಕ್ತ ಅನುದಾನ ನೀಡದ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಎಮ್ಮೆಮಾಡು ಗ್ರಾಮ ಪಂಚಾಯಿತಿ ಸದಸ್ಯ ಅರೆಯಡ ಹಂಸ ತಿಳಿಸಿದರು.

ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಗ್ರಾಮ ಪಂಚಾಯಿತಿಯಲ್ಲಿ 7 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಆದರೆ, ಪಾಡಿಯಾಣಿ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಯಾವ ಅಭಿವೃದ್ಧಿ ಕಾರ್ಯವೂ ನಡೆಯುತ್ತಿಲ್ಲ. ಜಿಲ್ಲೆಯ ಶಾಸಕರು, ಸಂಸದರು ಗಮನ ಹರಿಸುತ್ತಿಲ್ಲ. ಇದರಿಂದ ಬೇಸರಗೊಂಡು ರಾಜೀನಾಮೆ ಸಲ್ಲಿಸುತ್ತಿರುವೆ’ ಎಂದು ಹೇಳಿದರು.

ಈ ಹಿಂದಿನ ತೀರ್ಮಾನದಂತೆ ಎರಡು ಕಾಲು ವರ್ಷದ ಬಳಿಕ ಅಧ್ಯಕ್ಷ ಸ್ಥಾನವನ್ನು ನನಗೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಅಧಿಕಾರ ನೀಡಲು ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿ.ಎ ಮೋಯಿದ್ದೀನ್, ಅಬ್ದುಲ್ ಗಫೂರ್, ಸಿ.ಎ. ಶಾದುಲಿ. ಕೆ.ಎ. ಹಸೈನಾರ್, ಇಬ್ರಾಹಿಂ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.