ಸ್ಮಶಾನ ಜಾಗಕ್ಕಾಗಿ ಶವಯಾತ್ರೆ ನಡೆಸಿ ಕೂಡಿಗೆ ಗ್ರಾಮಸ್ಥರ ಪ್ರತಿಭಟನೆ

7

ಸ್ಮಶಾನ ಜಾಗಕ್ಕಾಗಿ ಶವಯಾತ್ರೆ ನಡೆಸಿ ಕೂಡಿಗೆ ಗ್ರಾಮಸ್ಥರ ಪ್ರತಿಭಟನೆ

Published:
Updated:
Deccan Herald

ಕುಶಾಲನಗರ: ಸಮೀಪದ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಸೂಕ್ತ ಜಾಗ ಕಲ್ಪಿಸಬೇಕು ಎಂದು ಒತ್ತಾಯಿಸಿ ಪಂಚಾಯಿತಿ ಕಚೇರಿ ಮುಂದೆ ಶವಯಾತ್ರೆ ನಡೆಸುವ ಮೂಲಕ ವಿನೂತನ ರೀತಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಭಾನುವಾರ ನಿಧನರಾದ ಹಳೆ ಕೂಡಿಗೆಯ ನಿವಾಸಿ ತಿಮ್ಮಪ್ಪ (50) ಅವರ ಅಂತ್ಯಕ್ರಿಯೆ ನಡೆಸಲು ಸೂಕ್ತ ಸ್ಥಳ ಇಲ್ಲದೆ ತೊಂದರೆ ಉಂಟಾಯಿತು.

ಶವ ಸಂಸ್ಕಾರಕ್ಕೆ ಜಾಗದ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪಂಚಾಯಿತಿ ಮುಂದೆ ಶವಯಾತ್ರೆ ನಡೆಸುವ ಮೂಲಕ ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತಹಶೀಲ್ದಾರ್ ಮಹೇಶ್ ಸ್ಥಳಕ್ಕೆ ಬಂದು ಪರಿಹಾರ ಸೂಚಿಸುವವರೆಗೂ ಶವ ಸಂಸ್ಕಾರ ಮಾಡುವುದಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್ ಒತ್ತಾಯಿಸಿದರು.

ತಹಶೀಲ್ದಾರ್ ಆದೇಶದ ಮೇರೆಗೆ ಗ್ರಾಮಲೆಕ್ಕಾಧಿಕಾರಿ ಸಚಿನ್ ಸ್ಥಳಕ್ಕೆ ಬಂದು, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮೇಲೆ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು. ಹಾರಂಗಿ ಹೊಳೆಯ ದಂಡೆಯಲ್ಲಿ ಶವ ಸಂಸ್ಕಾರ ನಡೆಸಿದರು.

ಈ ಸಂದರ್ಭ ಮಾತನಾಡಿದ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಕೂಡಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕೆ ಸ್ಮಶಾನಕ್ಕೆ ಜಾಗ ಕಲ್ಪಿಸಬೇಕು ಎಂದು ಹಲವು ವರ್ಷಗಳಿಂದಲೂ ಕಂದಾಯ ಇಲಾಖೆಗೆ ಬೇಡಿಕೆ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಯಿತು. ಈಗಲಾದರೂ ಅಧಿಕಾರಿಗಳು ಜಾಗವನ್ನು ಗುರುತಿಸಿಕೊಡಲು ಮುಂದಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !