ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | 72 ಕಿ.ಮೀ ಮಾನವ ಸರಪಳಿ, 10 ಲಕ್ಷ ಗಿಡ ನೆಡಲು ನಿರ್ಧಾರ

15ರಂದು ನಡೆಯಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಪೂರ್ವಭಾವಿ ಸಭೆ ನಡೆಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ
Published : 11 ಸೆಪ್ಟೆಂಬರ್ 2024, 5:17 IST
Last Updated : 11 ಸೆಪ್ಟೆಂಬರ್ 2024, 5:17 IST
ಫಾಲೋ ಮಾಡಿ
Comments

ಮಡಿಕೇರಿ: ಸಂಪಾಜೆಯಿಂದ ಶಿರಂಗಾಲ ಬಳಿಯ ಕಡುವಿನ ಹೊಸಳ್ಳಿವರೆಗೆ ಸುಮಾರು 72 ಕಿ.ಮೀ.ವರೆಗೆ ಮಾನವ ಸರಪಳಿ ಅಥವಾ ರಿಲೇ ಆಯೋಜಿಸಲು ಹಾಗೂ ಕೊಡಗು ಜಿಲ್ಲೆಯಲ್ಲಿ 10 ಲಕ್ಷ ಗಿಡಗಳನ್ನು ನೆಡುವುದಕ್ಕೆ ಇಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ನೇತೃತ್ವದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಇದಕ್ಕೂ ಮುನ್ನ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಸೆ. 15ರಂದು ನಡೆಯಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.

ಈ ಕಾರ್ಯಕ್ರಮ ನಿಮಿತ್ತ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಹಂತದಲ್ಲಿ ಎಲ್ಲರ ಸಹಕಾರದ ಅಗತ್ಯ ಇದೆ ಎಂದರು.

ಕೊಡಗು ಜಿಲ್ಲೆ ಅರಣ್ಯ ಪ್ರದೇಶ ಹೊಂದಿರುವುದರಿಂದ ಕೆಲವು ವಿನಾಯಿತಿಯನ್ನು ನೀಡಲಾಗಿದೆ. ಆದರೂ ನಾವು ಕನಿಷ್ಠ ಪಕ್ಷ ಸಂಪಾಜೆಯಿಂದ ಶಿರಂಗಾಲದ ಕಡುವಿನ ಹೊಸಹಳ್ಳಿ ಗಡಿಭಾಗದವರೆಗೆ ಮಾನವ ಸರಪಳಿ ನಡೆಸಬೇಕಿದೆ ಎಂದು ಹೇಳಿದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಯಶಸ್ವಿಗೊಳಿಸಬೇಕಿದೆ. ಸದ್ಯ ಆಯಾಯ ಗ್ರಾಮ, ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮಾನವ ಸರಪಳಿ ಅಥವಾ ರಿಲೇ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ವಿದ್ಯಾರ್ಥಿಗಳು, ಎನ್‍ಸಿಸಿ, ಎನ್‍ಎಸ್‍ಎಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕೋರಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ, ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂಪಾಜೆಯಿಂದ ಶಿರಂಗಾಲ ಬಳಿಯ ಕಡುವಿನ ಹೊಸಳ್ಳಿವರೆಗೆ ಸುಮಾರು 72 ಕಿ.ಮೀ.ವರೆಗೆ ಮಾನವ ಸರಪಳಿ ಅಥವಾ ರಿಲೇ ಮೂಲಕ ಕಾರ್ಯಕ್ರಮ ಆಯೋಜಿಸಲು ಹಾಗೂ ಜಿಲ್ಲೆಯಲ್ಲಿ 10 ಲಕ್ಷ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸದ್ಯ ಕೊಡಗು ಜಿಲ್ಲೆಯಲ್ಲಿ ಮಳೆ ಇರುವುದರಿಂದ ಪರಿಸ್ಥಿತಿಯನ್ನು ನೋಡಿಕೊಂಡು ಸ್ಥಳೀಯ ಮಟ್ಟದಲ್ಲಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಬೇಕು. ಜಿಲ್ಲೆಯ ಸಂಜೀವಿನಿ ಒಕ್ಕೂಟದವರು ಸೇರಿದಂತೆ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಎಲ್ಲರೂ ಕೈಜೋಡಿಸಲಿದ್ದಾರೆ ಎಂದರು.

ಮುಖಂಡರಾದ ಯಾಕೂಬ್ ಅವರು ಮಾತನಾಡಿ, ‘ದೇವಾಲಯ, ಚರ್ಚ್, ಮಸೀದಿ, ವಕ್ಫ್ ಬೋರ್ಡ್ ಸೇರಿದಂತೆ ಹಲವರನ್ನು ಆಹ್ವಾನಿಸಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು’ ಎಂದು ತಿಳಿಸಿದರು.

ಮುಖಂಡ ಅಮೀದ್ ಮಾತನಾಡಿ, ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಯಶಸ್ಸುಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳನ್ನು ಆಹ್ವಾನಿಸಬೇಕು’ ಎಂದು ಹೇಳಿದರು.

ಜಿಲ್ಲಾ ಶಿಕ್ಷಣಾಧಿಕಾರಿ ಎಂ.ಮಹದೇವಸ್ವಾಮಿ ಅವರು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಈಗಾಗಲೇ ಶಾಲೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಮುಖಂಡರಾದ ವೀರಭದ್ರಯ್ಯ, ಜಗದೀಶ್ ಚಂದ್ರಪ್ರಸಾದ್, ಪ್ರಾಂಶುಪಾಲರಾದ ವಿಜಯ್, ಅಧಿಕಾರಿಗಳಾದ ಹೊನ್ನೇಗೌಡ, ಪ್ರವೀಣ್ ಕುಮಾರ್, ಕವಿತಾ, ಶಿವಶಂಕರ, ಬಾಲಕೃಷ್ಣ ರೈ ಭಾಗವಹಿಸಿದ್ದರು. 

ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು
ಕೆ.ಟಿ.ಬೇಬಿ ಮ್ಯಾಥ್ಯೂ
ಕೆ.ಟಿ.ಬೇಬಿ ಮ್ಯಾಥ್ಯೂ
ರೇವತಿ
ರೇವತಿ
ಎಚ್.ಎಲ್. ದಿವಾಕರ್
ಎಚ್.ಎಲ್. ದಿವಾಕರ್

ಕೊಡಗು ಜಿಲ್ಲೆ ಅರಣ್ಯ ಪ್ರದೇಶ ಹೊಂದಿರುವುದರಿಂದ ಕೆಲವು ವಿನಾಯಿತಿ ವಿದ್ಯಾರ್ಥಿಗಳು, ಎನ್‍ಸಿಸಿ, ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಭಾಗಿ ಸಂಘ, ಸಂಸ್ಥೆಗಳ ಸಹಕಾರ ಕೋರಿದ ಹೆಚ್ಚುವರಿ ಜಿಲ್ಲಾಧಿಕಾರಿ

ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್‌ನ ಪ್ರತಿನಿಧಿಗಳು ಸ್ಥಳೀಯ ಮಟ್ಟದಲ್ಲಿ ಪಾಲ್ಗೊಳ್ಳಲಿದ್ದಾರೆ

– ಕೆ.ಟಿ.ಬೇಬಿಮ್ಯಾಥ್ಯೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಪ್ರಧಾನ ಆಯುಕ್ತ.

ಲಯನ್ಸ್ ರೋಟರಿ ಜಾನಪದ ಪರಿಷತ್ತು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳನ್ನು ಆಹ್ವಾನಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು

–ಮುನೀರ್ ಅಹ್ಮದ್ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದ್ದು ಸರ್ಕಾರದ ಆಶಯದಂತೆ ಕಾರ್ಯಕ್ರಮ ಆಯೋಜಿಸಬೇಕು

– ಎಚ್.ಎಲ್.ದಿವಾಕರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ

ದಿನಾಚರಣೆಯಂದು ವಿವಿಧ ಸಮಾಜಗಳ ಪ್ರತಿನಿಧಿಗಳು ಸಂಘ ಸಂಸ್ಥೆಯವರು ಅವರವರ ಸಾಂಸ್ಕೃತಿಕ ಉಡುಪಿನಲ್ಲಿ ಪಾಲ್ಗೊಂಡರೆ ಆಕರ್ಷಣೀಯವಾಗಿರುತ್ತದೆ

–ರೇವತಿ ರಮೇಶ್ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT