ಸೋಮವಾರಪೇಟೆ (ಕೊಡಗು ಜಿಲ್ಲೆ): ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಖಾತೆ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಅವರು ಶನಿವಾರ ಇಲ್ಲಿಗೆ ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇದಕ್ಕಾಗಿಯೇ 18 ಸಾವಿರ ಶಿಕ್ಷಕರ ಅಯ್ಕೆ ಪ್ರಕ್ರಿಯೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈಗ 51 ಸಾವಿರ ಅತಿಥಿ ಶಿಕ್ಷಕರು ಕೆಲಸ ಮಾಡುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ರಾಜ್ಯದ 46 ಸಾವಿರ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಹೇಳಿದರು.

ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡು ವಿದ್ಯಾಭ್ಯಾಸ ಮೊಟುಕುಗೊಳಿಸಬಾರದು ಎಂಬ ಸದುದ್ದೇಶದಿಂದ ಒಟ್ಟು 3 ಬಾರಿ ಪರೀಕ್ಷೆ ಬರೆಯುವ ಅವಕಾಶ ನೀಡಿದ್ದರಿಂದ ಪ್ರಸಕ್ತ ಸಾಲಿನಲ್ಲಿ ಶೇ 79.89ರಷ್ಟು ವಿದ್ಯಾರ್ಥಿಗಳು ತಮ್ಮ ಸ್ವಂತ ಪರಿಶ್ರಮದ ಮೇಲೆ ಉತ್ತೀರ್ಣರಾಗಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.