ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಪೋಕ್ಲು | ಹೃದಯಾಘಾತದಿಂದ 24 ವರ್ಷದ ಯುವತಿ ಸಾವು

Published 27 ಜೂನ್ 2024, 13:20 IST
Last Updated 27 ಜೂನ್ 2024, 13:20 IST
ಅಕ್ಷರ ಗಾತ್ರ

ನಾಪೋಕ್ಲು: ಯುವತಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.

ಕಾಫಿ ಬೆಳೆಗಾರ ಮಣವಟ್ಟೀರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ.
ನಿಲಿಕಾ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕರ್ತವ್ಯಕ್ಕೆ ಹೊರಟಿದ್ದಳು. ಈ ಸಂದರ್ಭ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ  ಹಿಂತಿರುಗಿ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ. ಪೋಷಕರು ಮಗಳತ್ತ ತೆರಳುವ ವೇಳೆಗೆ ನಿಲಿಕಾ ಉಸಿರಾಟ ಸ್ಥಗಿತಗೊಳಿಸಿದ್ದಳು. ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದರೆ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಆಪ್ತರ ಅಶ್ರುತರ್ಪಣದ ನಡುವೆ ಅಂತ್ಯ ಸಂಸ್ಕಾರ ಗ್ರಾಮದಲ್ಲಿ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT