ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂಟಿಕೊಪ್ಪ: ಸಿನಿಮೀಯ ಶೈಲಿಯಲ್ಲಿ ಪಲ್ಟಿ ಹೊಡೆದ ಕಾರು; ಇಬ್ಬರು ಮಹಿಳೆಯರಿಗೆ ಗಾಯ

Published 17 ಮಾರ್ಚ್ 2024, 16:52 IST
Last Updated 17 ಮಾರ್ಚ್ 2024, 16:52 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ಬಾಲಕನೊಬ್ಬ ಚಾಲನೆ ಮಾಡುತ್ತಿದ್ದ ಕಾರೊಂದು ಇಲ್ಲಿನ ಹೇರೂರು ಜಂಗಲ್ ರೆಸಾರ್ಟ್ ಸಮೀಪ ಭಾನುವಾರ ಪಲ್ಟಿ ಹೊಡೆದು ರಸ್ತೆಯಲ್ಲಿದ್ದ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

‘9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಅತಿ ವೇಗವಾಗಿ ಬಸವನಹಳ್ಳಿ ಕಡೆಯಿಂದ ಕಾರಿನಲ್ಲಿ ಬಂದು ರೆಸಾರ್ಟ್‌ನ ವಾಹನ ನಿಲುಗಡೆ ಮಾಡುವ ಸ್ಥಳದಲ್ಲಿನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು 3 ಬಾರಿ ಸಿನಿಮೀಯ ಶೈಲಿಯಲ್ಲಿ ಪಲ್ಟಿ ಹೊಡೆದಿದೆ. ಕಾರಿಗೆ ಸಿಲುಕಿದ ರಸ್ತೆ ಬದಿಯಲ್ಲಿ ನಿಂತಿದ್ದ ಇಬ್ಬರು ಮಹಿಳೆಯರು ಗಾಯಗೊಂಡರು. ಕಾರಿನಲ್ಲಿ 4 ಜನರಿದ್ದು ಅವರಿಗೂ ಗಾಯಗಳಾಗಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT