ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೋಟರಿ ಮಿಸ್ಟಿ ಹಿಲ್ಸ್‌ನಿಂದ 5ರಂದು ಮಕ್ಕಳ ದಸರಾ

ಮಕ್ಕಳ ಸಂತೆ, ಅಂಗಡಿ, ಮಂಟಪ, ಛದ್ಮವೇಷ, ಕ್ಲೇ ಮಾಡೆಲಿಂಗ್ ಸೇರಿದಂತೆ ಹಲವು ಸ್ಪರ್ಧೆ ಆಯೋಜನೆ
Published : 19 ಸೆಪ್ಟೆಂಬರ್ 2024, 7:16 IST
Last Updated : 19 ಸೆಪ್ಟೆಂಬರ್ 2024, 7:16 IST
ಫಾಲೋ ಮಾಡಿ
Comments

ಮಡಿಕೇರಿ: ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಅಕ್ಟೋಬರ್ 5ರಂದು ನಗರದ ಗಾಂಧಿ ಮೈದಾನದಲ್ಲಿ 11ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಮಕ್ಕಳ ದಸರಾ ಸ್ಪರ್ಧೆಗಳು ಅ. 5 ರಂದು ಬೆಳಿಗ್ಗೆ 9.30ಕ್ಕೆ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ.

ಎಸ್‌ಎಸ್‌ಎಲ್‌ಸಿ ಒಳಗಿನ ವಿದ್ಯಾರ್ಥಿಗಳಿಗಾಗಿ ನಡೆಯುವ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಠ 5 ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾರ್ಥಗಳ ಮಾರಾಟಕ್ಕೆ ಆದ್ಯತೆ ಇದೆ. ಮಕ್ಕಳ ಅಂಗಡಿಯಲ್ಲಿ ಗರಿಷ್ಠ ಇಬ್ಬರು ಸ್ಪರ್ಧಿಗಳಿಗೆ ಅವಕಾಶವಿದೆ.  

10 ನಿಮಿಷದ ಪ್ರದರ್ಶನಾವಧಿಯುಳ್ಳ ಮಂಟಪ ಸ್ಪರ್ಧೆಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು ಪಾಲ್ಗೊಳ್ಳಬಹುದು. ಯಾವುದೇ ಕಾರಣಕ್ಕೂ ಮಂಟಪದಲ್ಲಿ ವಿದ್ಯುತ್ ಮತ್ತು ಬೆಂಕಿಯಂಥ ಅಪಾಯಕಾರಿ ವಸ್ತುಗಳನ್ನು ಬಳಸಿ ಪ್ರದರ್ಶನ ನೀಡುವಂತಿಲ್ಲ.

ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳ ವಿಭಾಗ, 1ನೇ ತರಗತಿಯಿಂದ 4ನೇ ತರಗತಿ, 5 ರಿಂದ 7ನೇ ತರಗತಿಗಳ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಛದ್ಮವೇಷ ಸ್ಪರ್ಧೆಗಳು ಹಾಗೂ 5 ರಿಂದ 7 ನೇ ತರಗತಿ ಹಾಗೂ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕ್ಲೇ ಮಾಡೆಲಿಂಗ್ ಸ್ಪರ್ಧೆಗಳು ನಡೆಯಲಿವೆ. ನೋಂದಣಿಗೆ ಸೆ. 28 ಕೊನೆಯ ದಿನ.

ಮಾಹಿತಿಗೆ ಹಾಗೂ ನೋಂದಣಿಗಾಗಿ ಮಕ್ಕಳ ಸಂತೆ - ದಿವ್ಯಾ ಚೇತನ್ 95381 01863, ಚಂದ್ರಿಕಾರಾಜು - 99865 18742, ಮಕ್ಕಳಿಂದ ಅಂಗಡಿ ಸ್ಪರ್ಧೆ– ಶಪಾಲಿ ರೈ - 97415 23484, ರಶ್ಮಿ ಪ್ರವೀಣ್ - 99023 62038, ಮಕ್ಕಳಿಂದ ಮಂಟಪ - ಸವಿತಾ ಅರುಣ್ - 94800 03811, ಪ್ರೀತು 82770 50366, ಛದ್ಮವೇಷ ಸ್ಪರ್ಧೆ- ನಮಿತಾರೈ 94489 76405, ಶಮ್ಮಿ ಪ್ರಭು 80885 70167, ಕ್ಲೇ ಮಾಡೆಲಿಂಗ್ - ಗಾನಾಪ್ರಶಾಂತ್- 94497 13748, ಪಲ್ಲವಿ ಪ್ರಸಾದ್ 99729 63151 ಸಂಪರ್ಕಿಸಬಹುದು ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮತ್ತು     ಹಾಗೂ ಮಕ್ಕಳ ದಸರಾ ಸಂಚಾಲಕ ಎಚ್.ಟಿ.ಅನಿಲ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT