ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

40 ಸಾವಿರ ಮಂದಿಯಿಂದ ಮಾನವ ಸರಪಳಿ

ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸಿದ ಸಾವಿರಾರು ಮಕ್ಕಳು
Published : 15 ಸೆಪ್ಟೆಂಬರ್ 2024, 16:29 IST
Last Updated : 15 ಸೆಪ್ಟೆಂಬರ್ 2024, 16:29 IST
ಫಾಲೋ ಮಾಡಿ
Comments

ಪ್ರಜಾವಾಣಿ ವಾರ್ತೆ

ಮಡಿಕೇರಿ: ಸಂವಿಧಾನ ಪ್ರಸ್ತಾವನೆಯನ್ನು ವಾಚಿಸಿದ ಸಾವಿರಾರು ಮಕ್ಕಳು, ಪ್ರಜಾಪ‍್ರಭುತ್ವದ ಹಿರಿಮೆಯನ್ನು ಅಭಿವ್ಯಕ್ತಿಸಿದ ಕಲಾತಂಡಗಳು, ಕೊಡಗಿನ ಉದ್ದಗಲಕ್ಕೂ ಪರಸ್ಪರ ಕೈಹಿಡಿದು ನಿಂತ ವಿದ್ಯಾರ್ಥಿಗಳು, ಬರೋಬರಿ 40 ಸಾವಿರಕ್ಕೂ ಅಧಿಕ ಮಂದಿಯಿಂದ ಮಾನವ ಸರಪಳಿ...

ಈ ಎಲ್ಲ ದೃಶ್ಯಗಳು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಭಾನುವಾರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಂಡು ಬಂತು.

ಜಿಲ್ಲೆಯಲ್ಲಿ ನಿಗದಿಪಡಿಸಲಾಗಿದ್ದ ಒಟ್ಟು 77.2 ಕಿ.ಮೀನಷ್ಟು ಪ್ರದೇಶದಲ್ಲಿ ಮಾನವ ಸರಪಳಿ ಹಾಗೂ ರಿಲೇ ನಡೆಸಲಾಯಿತು.

ವಿವಿಧತೆಯಲ್ಲಿ ಏಕತೆಯನ್ನು ಸಾರುವ ಪರಿಕಲ್ಪನೆಯಡಿ ರಾಷ್ಟ್ರನಾಯಕರು, ಸಾಧಕರು, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಧರಿಸಿದ 100 ಮಕ್ಕಳು ಮಾನವ ಸರಪಳಿಯ ಉದ್ದಗಲಕ್ಕೂ ಕಂಡು ಬಂದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಎಂಬ ಬರಹವುಳ್ಳ 10 ಅಡಿ ವ್ಯಾಸದ ಬೃಹತ್ ಬಲೂನು ಇವುಗಳಿಗೆಲ್ಲ ಕಿರೀಟವಿಟ್ಟಂತೆ ಹಾರಾಡಿತು.  

ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ‘ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು, ವಿದ್ಯಾರ್ಥಿಗಳು, ಶಿಕ್ಷಕರು ಪೊಲೀಸರು ಹೀಗೆ ಹಲವಾರು ಮಂದಿ ಮಾನವ ಸರಪಳಿ ಹಾಗೂ ರಿಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮಾತನಾಡಿ, ‘ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸಹೋದರತೆ, ಭ್ರಾತೃತ್ವ ಹೀಗೆ ಹಲವು ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು’ ಎಂದರಲ್ಲದೇ, ‘ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನೂ ಮರೆಯಬಾರದು’ ಎಂದು ಕಿವಿಮಾತು ಹೇಳಿದರು.

ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ‘ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸಹ ಇತರರಂತೆ ಬದುಕು ಕಟ್ಟಿಕೊಂಡಾಗ ಪ್ರಜಾಪ್ರಭುತ್ವದ ಆಶಯಕ್ಕೆ ಮೌಲ್ಯ ದೊರೆಯಲಿದೆ’ ಎಂದು ಪ್ರತಿಪಾದಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಂವಿಧಾನ ಪೀಠಿಕೆ ವಾಚಿಸಿದರು. ಕಲಾವಿದ ಈ.ರಾಜು ತಂಡದವರು ಗೀತಗಾಯನ ಪ್ರಸ್ತುತಪಡಿಸಿದರು. ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಗಿರಿಜನ ನೃತ್ಯ ಪ್ರದರ್ಶಿಸಿದರು, ಕಡೂರಿನ ಶ್ರೀಬೀರಲಿಂಗೇಶ್ವರ ಡೊಳ್ಳು ಯುವಕ ಸಂಘದ ಕಲಾವಿದರು ಡೊಳ್ಳು ಕುಣಿತ ಹಾಗೂ ಶಿವಮೊಗ್ಗದ ಜ್ಯೋತಿ ಬಂಜಾರ ನೃತ್ಯ ಕಲಾವಿದರು ಪ್ರದರ್ಶಿಸಿದ ಲಂಬಾಣಿ ನೃತ್ಯ ಗಮನ ಸೆಳೆಯಿತು. ರೇವತಿ ಮತ್ತು ತಂಡದವರು ನಾಡಗೀತೆ ಹಾಡಿದರು‌. 

ಜಿಎಂಪಿ ಶಾಲೆಯ ಗಗನ್‌ ಮತ್ತು ಚಕ್ರಪತಿ ಎಂಬ ವಿದ್ಯಾರ್ಥಿಗಳಿಬ್ಬರು ಅಂಬೇಡ್ಕರ್ ಅವರ ವೇಷದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಪೊಲೀಸರು ಬೈಕ್ ಮೂಲಕ ರಿಲೇ ನಡೆಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ರಾಜೇಶ್ ಗೌಡ, ಉಪ ನಿರ್ದೇಶಕ ಶೇಖರ್, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಮುಖಂಡರಾದ ಎಚ್.ಎಲ್.ದಿವಾಕರ, ವಾರ್ತಾಧಿಕಾರಿ ಚಿನ್ನಸ್ವಾಮಿ ಭಾಗವಹಿಸಿದ್ದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದ್ದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದ್ದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಂಬೇಡ್ಕರ್ ವೇಷ ತೊಟ್ಟ ಜಿಎಂಪಿ ಶಾಲೆಯ ಗಗನ್ ಮತ್ತು ಚಕ್ರಪತಿ ಎಂಬ ವಿದ್ಯಾರ್ಥಿಗಳೊಂದಿಗೆ ಮಾನವ ಸರಪಳಿ ರಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಸಕ ಡಾ.ಮಂತರ್‌ಗೌಡ ಮುಖ್ಯಮಂತ್ರಿಯ ಕಾನೂನುಸಲಹೆಗಾರ ಎ.ಎಸ್.ಪೊನ್ನಣ್ಣ ಸಮಾಜ ಕಲ್ಯಾಣ ಇಲಾಖೆಯ ನೋಡಲ್ ಅಧಿಕಾರಿ ರಾಜೇಶ್‌ಗೌಡ ಭಾಗವಹಿಸಿದ್ದರು

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು

Highlights - ಹೆಚ್ಚುವರಿ ಜಿಲ್ಲಾಧಿಕಾರಿಯಿಂದ ಸಂವಿಧಾನ ಪೀಠಿಕೆ ವಾಚನ ಕಲಾವಿದ ಈ.ರಾಜು ತಂಡದವರಿಂದ ಗೀತಗಾಯನ ರೇವತಿ ಮತ್ತು ತಂಡದವರು ನಾಡಗೀತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT