ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕರೆ

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ
Published 30 ಮೇ 2024, 6:22 IST
Last Updated 30 ಮೇ 2024, 6:22 IST
ಅಕ್ಷರ ಗಾತ್ರ

ಸೋಮವಾರಪೇಟೆ: ಕೊಡವ ಸಮಾಜ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ ಮಂಗಳವಾರ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿ, ಚುನಾವಣೆಯಲ್ಲಿ ಗೆಲುವು ದಾಖಲಿಸಿದರೆ, ಕೊಡಗಿನ ಪದವೀಧರರ ಧ್ವನಿಯಾಗಿ ವಿಧಾನ ಪರಿಷತ್‌ನಲ್ಲಿ ಕೆಲಸ ನಿರ್ವಹಿಸುವುದಾಗಿ ಹೇಳಿದರು. ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿಯಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.

ಬಿಜೆಪಿ ಮುಖಂಡ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರ ಸಂಖ್ಯೆ ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ನ ಬೋಜೇಗೌಡ ಹಾಗೂ ಪದವೀಧರರ ಕ್ಷೇತ್ರದಿಂದ ಬಿಜೆಪಿಯ ಧನಂಜಯ ಸರ್ಜಿ ಅವರನ್ನು ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮತ್ತೋರ್ವ ಮುಖಂಡ ಕೆ.ಜಿ. ಬೋಪಯ್ಯ ಮಾತನಾಡಿ, ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರವನ್ನು ಎನ್‌ಡಿಎ ಗೆಲ್ಲಬೇಕು. ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಹಾಗೂ ಕೊಡಗು ಜಿಲ್ಲಾ ಚುನಾವಣಾ ಉಸ್ತುವಾರಿ ಅರುಣ್ ಕುಮಾರ್ ಮಾತನಾಡಿ, 1988ರಿಂದಲೂ ಈ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಭ್ಯರ್ಥಿಗಳ ಜೊತೆಗೆ ಕಾರ್ಯಕರ್ತರೂ ಗೆದ್ದಿದ್ದಾರೆ. ಈ ಬಾರಿಯೂ ಅದೇ ಫಲಿತಾಂಶ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಪ್ರಮುಖರಾದ ಡಾ. ಬಿ.ಸಿ. ನವೀನ್ ಕುಮಾರ್, ಅನಿತಾ ಪೂವಯ್ಯ, ನೆಲ್ಲೀರ ಚಲನ್, ಜೆಡಿಎಸ್ ಪ್ರಮುಖರಾದ ನಾಗರಾಜ್, ಪ್ರವೀಣ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT