ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ: ಬಿಜೆಪಿ–ಜೆಡಿಎಸ್‌ ಮೈತ್ರಿಕೂಟಕ್ಕೆ ಜಯ

ಸೋಮವಾರಪೇಟೆ ಪ.ಪಂ: ಅಧ್ಯಕ್ಷರಾಗಿ ಜಯಂತಿ ಶಿವಕುಮಾರ್, ಉಪಾಧ್ಯಕ್ಷರಾಗಿ ಮೋಹಿನಿ ಅವಿರೋಧ ಆಯ್ಕೆ
Published : 12 ಸೆಪ್ಟೆಂಬರ್ 2024, 4:28 IST
Last Updated : 12 ಸೆಪ್ಟೆಂಬರ್ 2024, 4:28 IST
ಫಾಲೋ ಮಾಡಿ
Comments

ಸೋಮವಾರಪೇಟೆ: ಇಲ್ಲಿನ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಜೆಡಿಎಸ್‌ನ ಜಯಂತಿ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಮೋಹಿನಿ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜಯಂತಿ ಶಿವಕುಮಾರ್ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೋಹಿನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇವರನ್ನು ಹೊರತುಪಡಿಸಿದಂತೆ ಕಾಂಗ್ರೆಸ್‌ನಿಂದ ಯಾರೊಬ್ಬರೂ ನಾಮಪತ್ರ ಸಲ್ಲಿಸಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಅವರು ಮಧ್ಯಾಹ್ನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಘೋಷಣೆ ಮಾಡಿದರು. ಈ ಸಂದರ್ಭ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಇದ್ದರು.

ಪಟ್ಟಣ ಪಂಚಾಯಿತಿಗೆ ಆಗಮಿಸಿದ್ದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ‘ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಆಡಳಿತ ಮುಂದುವರೆದಿರುವುದು ಒಳ್ಳೆಯ ಬೆಳವಣಿಗೆ. ದೇಶದ ಅಭಿವೃದ್ಧಿಯಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸಿದ್ದು, ಮುಂದಿನ ದಿನಗಳಲ್ಲಿ ಇಲ್ಲಿನ ಪಟ್ಟಣ ಪಂಚಾಯಿತಿ ಅಭಿವೃದ್ಧಿ ಕೆಲಸಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು’ ಎಂದು ಹೇಳಿದರು.

ಬಿಜೆಪಿ– ಜೆಡಿಎಸ್‌ ಮೈತ್ರಿಕೂಟ ಯಶಸ್ವಿಯಾಗಿದೆ. ಇದೇ ಸೂತ್ರವನ್ನು ಹುಣಸೂರು, ಬನ್ನೂರು, ಮೈಸೂರು ಸೇರಿದಂತೆ ಎಲ್ಲೆಡೆ ಮುಂದುವರೆಸಲಾಗುವುದು. ಇದರಿಂದ ಎರಡೂ ಪಕ್ಷಗಳಿಗೆ ಲಾಭವಾಗಲಿದೆ ಎಂದರು.

‘ಸಿ’ ಮತ್ತು ‘ಡಿ’ ಭೂಮಿ ಸಮಸ್ಯೆ ಗಂಭೀರ ವಿಷಯ. ಮೊದಲನೆಯದಾಗಿ ಕಂದಾಯ, ಅರಣ್ಯ ಮತ್ತು ಕೃಷಿಕರು ಸೇರಿ ಜಂಟಿ ಸರ್ವೆ ಮಾಡಬೇಕಿದೆ. ಸುಪ್ರಿಂಕೋರ್ಟ್ 90 ದಿನಗಳ ಗಡುವು ನೀಡಿದ್ದು, ಅಷ್ಟರಲ್ಲಿ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ ನೀಡಿದೆ ಎಂದರು.

ಬಿಜೆಪಿ ಮುಖಂಡ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ‘ಕಳೆದ 30ವರ್ಷಗಳಿಂದ ಪಟ್ಟಣ ಪಂಚಾಯಿತಿ ಆಡಳಿತವನ್ನು ಬಿಜೆಪಿ ಮಾಡುತ್ತಿದೆ. ನೂರಾರು ಕೋಟಿ ಹಣವನ್ನು ತಂದು ಅಭಿವೃದ್ಧಿ ಕೆಲಸ ಮಾಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸವನ್ನು ಮುಂದುವರೆಸಲಾಗುವುದು. ಶಾಸಕರು ಹೆಚ್ಚಿನ ಸಹಕಾರ ನೀಡಬೇಕು’ ಎಂದು ಹೇಳಿದರು.

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಎನ್ ಡಿಎ ಅಭ್ಯರ್ಥಿ ಜೆಡಿಎಸ್ ನ ಜಯಂತಿ ಶಿವಕುಮಾರ್(ಬಲಭಾಗದಲ್ಲಿರುವವರು) ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಮೋಹಿನಿ  ಆಯ್ಕೆ ಸಂದರ್ಭ ಸಂಸದ ಯದುವೀರ್ ಉಪಸ್ಥಿತರಿದ್ದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಮುಖಂಡರಾದ ಎಸ್.ಜಿ. ಮೇದಪ್ಪ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಇದ್ದರು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಎನ್ ಡಿಎ ಅಭ್ಯರ್ಥಿ ಜೆಡಿಎಸ್ ನ ಜಯಂತಿ ಶಿವಕುಮಾರ್(ಬಲಭಾಗದಲ್ಲಿರುವವರು) ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಮೋಹಿನಿ  ಆಯ್ಕೆ ಸಂದರ್ಭ ಸಂಸದ ಯದುವೀರ್ ಉಪಸ್ಥಿತರಿದ್ದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಮುಖಂಡರಾದ ಎಸ್.ಜಿ. ಮೇದಪ್ಪ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಇದ್ದರು.

ಸಂಭ್ರಮಾಚರಣೆಯಲ್ಲಿ ಸಂಸದ ಯದುವೀರ್‌ ಭಾಗಿ ಮೈತ್ರಿಕೂಟದ ಸೂತ್ರ ಇತರೆಡೆಗೂ ಅನ್ವಯ ಎಂದ ಸಂಸದ ಕಾಂಗ್ರೆಸ್‌ನಿಂದ ಕಣಕ್ಕಿಳಿಯದ ಸದಸ್ಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT