ಕುಶಾಲನಗರ: ಶಿಕ್ಷಣದೊಂದಿಗೆ ವಿಶೇಷ ಕಲಿಕೆಯ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು ಸಾಧನೆ ಮಾಡಬೇಕು ಎಂದು ಶಾಸಕ ಡಾ. ಮಂತರ್ ಗೌಡ ಸಲಹೆ ನೀಡಿದರು.

ಇಲ್ಲಿನ ಸ್ಮಾರ್ಟ್ ಬ್ರೈನ್ ಅಬಾಕಸ್ ಅಕಾಡೆಮಿ ವತಿಯಿಂದ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಚಿಕ್ಕವಯಸ್ಸಿನಲ್ಲೇ ಸ್ಪರ್ಧಾತ್ಮಕ ಕಾರ್ಯಕ್ರಮಗಳಲ್ಲಿ ಭಾಗಹಿಸುವುದರಿಂದ ಸ್ಪರ್ಧಾಯುಗಕ್ಕೆ ಹೇಗೆ ತೆರೆದುಕೊಳ್ಳಬೇಕು ಎಂಬುದು ತಿಳಿಯುತ್ತದೆ. ಸೋಲು –ಗೆಲುವಿಗಾಗಿ ಅಲ್ಲದೇ ಒಳ್ಳೆಯ ಅನುಭವಕ್ಕಾಗಿ ಭಾಗವಹಿಸಬೇಕು. ವಿಶೇಷವಾಗಿ ಸೋತಾಗ ನಮಗೆ ಸಿಗುವ ಅನುಭವ ಮತ್ತು ಜೀವನದ ಪಾಠ ಗೆದ್ದಾಗ ಸಿಗುವುದಿಲ್ಲ. ಅಲ್ಲದೇ, ಒಮ್ಮೆ ಸೋತವರು ಮತ್ತೊಮ್ಮೆ ಗೆಲ್ಲಲೇಬೇಕು. ಅದಕ್ಕೆ ನಿರಂತರ ಪರಿಶ್ರಮ ಬೇಕಾಗುತ್ತದೆ’ ಎಂದು ಹೇಳಿದರು.

‘ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಶಿಕ್ಷಣ ಕಲಿಕೆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಮುನ್ನಡೆಯುವ ಮೂಲಕ ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಅಬಾಕಸ್ ಪೂರಕವಾಗಿದೆ. ಇದನ್ನು ಸದುಪಯೋಗಪಡಿಸಿಕೊಂಡು ಪ್ರತಿಭಾನ್ವಿತರಾಗಿ ಮುಂದೆ ಬರಬೇಕು’ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ‘ಶಿಕ್ಷಣದೊಂದಿಗೆ ಅಬಾಕಸ್ ಮೂಲಕವೂ ವಿದ್ಯಾರ್ಥಿಗಳು ವಿಶೇಷ ಕಲಿಕ ಸಾಮರ್ಥ್ಯದೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡು ಮುನ್ನಡೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು.

ಸ್ಮಾರ್ಟ್ ಬ್ರೈನ್ಸ್ ಅಬಾಕಸ್ ಆಕಾಡೆಮಿ ನಿರ್ದೇಶಕಿ ಕುಸುಮಾ ಎಸ್. ರಾಜ್ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರಾಕೇಶ್, ಸಮಾಜಸೇವಕ ಸೈಜನ್ ಕೆ. ಪೀಟರ್, ಸುಕೇಶ್ ರಾಜ್, ಪ್ರಮುಖರಾದ ವಿಶಾಲಕ್ಷಿ, ಪ್ರಭಾವತಿ ಪಾಲ್ಗೊಂಡಿದ್ದರು.

ಅಬಾಕಸ್ ಆಕಾಡೆಮಿ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳಿಂದ 30ಕ್ಕೂ ಹೆಚ್ಚು ಶಾಲೆಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಬಾಕಸ್, ವೇದಿಕ್ ಮ್ಯಾಥ್ಸ್, ರೂಬಿಕ್ಸ್ ಕ್ಯೂಬ್,ಕ್ಯಾಲಿಗ್ರಫಿ ಮತ್ತು ಮಿಡ್ಬ್ರೇನ್ ಆಕ್ಟಿವೇಶನ್, ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರತಿಭೆ ಅನಾವರಣಗೊಳಿಸಿದರು.

ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಲಿಕಾ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಯೂನಿಕ್ ಅಕಾಡೆಮಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಚಿನ್ಮಯ್, ಅಬಾಕಸ್ ಅಕಾಡೆಮಿಯಲ್ಲಿ ಕಲಿತು ಕಣ್ಣಿಗೆ ಬಟ್ಟೆ ಕಟ್ಟಿ ನಿಗದಿತ ಸಮಯದಲ್ಲಿ ಚೆಸ್ ಆಡುವ ಮೂಲಕ ಇಂಡಿಯಾ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸಾಧನೆ ಮಾಡಿರುವುದನ್ನು ಪರಿಗಣಿಸಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.