ಮಡಿಕೇರಿ: ‘ದೇಶ ಮೊದಲು ಎಂಬ ಮನೋಭಾವ ಎಲ್ಲರಲ್ಲೂ ಮೂಡಬೇಕು’ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಎಸ್.ಬಾಲಕೃಷ್ಣ ಪ್ರತಿಪಾದಿಸಿದರು.

ಇಲ್ಲಿನ ಗೌಡ ಸಮಾಜದಲ್ಲಿ ಬುಧವಾರ ಆರಂಭವಾದ 3 ದಿನಗಳ ಎಬಿವಿಪಿಯ 45ನೇ ಕರ್ನಾಟಕ ದಕ್ಷಿಣ ಪ್ರಾಂತ ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ನ ನಂತರ ಈಗ ‘ವೈಟ್ ಕಾಲರ್’ ಭಯೋತ್ಪಾದನೆ ಬಂದಿದೆ. ಇಂತಹ ಕಾಲಘಟ್ಟದಲ್ಲಿ ದೇಶ ಮೊದಲೆಂಬುದೇ ಮುಖ್ಯವಾಗಬೇಕು’ ಎಂದರು.

ಸಮ್ಮೇಳನಕ್ಕೆ ಚಾಲನೆ ನೀಡಿದ ಅಂತರರಾಷ್ಟ್ರೀಯ ಅಥ್ಲೀಟ್ ತೀತಮಾಡ ಅರ್ಜುನ್ ದೇವಯ್ಯ, ‘ವಿಚಾರ ಮತ್ತು ತತ್ವಗಳಿಂದ ಜನಜೀವನ ಬದಲಾಗದು. ಅಳವಡಿಸಿಕೊಂಡರೆ ಮಾತ್ರ ಬದಲಾಗುತ್ತದೆ’ ಎಂದು ಹೇಳಿದರು.

ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ ಜಿಲ್ಲೆಗಳಿಂದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗಿಯಾಗಿದ್ದಾರೆ.

ಹಿರಿಯ ಕಲಾವಿದೆ ರಾಣಿ ಮಾಚಯ್ಯ, ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ರವಿ ಮಂಡ್ಯ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಈಶ್ವರ ಭಟ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೊಳ್ಳ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.