ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಯಾಚನೆ ಮಾಡಿ ರಸ್ತೆಬದಿ ನಿಂತಿದ್ದವರ ಮೇಲೆ ಹರಿದ ಕಾರು; ಒಬ್ಬರ ಸಾವು

Published 18 ಏಪ್ರಿಲ್ 2024, 21:14 IST
Last Updated 18 ಏಪ್ರಿಲ್ 2024, 21:14 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ವಾಲ್ನೂರು ಗ್ರಾಮದ ಸಮೀಪ ಮತಯಾಚನೆ ಮುಗಿಸಿ ರಸ್ತೆ ಬದಿ ನಿಂತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಗುರುವಾರ ರಾತ್ರಿ ಕಾರೊಂದು ಡಿಕ್ಕಿ ಹೊಡೆದಿದ್ದು, ರಾಮಪ್ಪ (60) ಎಂಬುವವರು ಮೃತಪಟ್ಟಿದ್ದಾರೆ. ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆಸಿದ ಕಾರನ್ನು ಚಿಕ್ಲಿಹೊಳೆ ಸಮೀಪ ಪತ್ತೆ ಹಚ್ಚಿದ್ದು ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು‌‌ ಪೊಲೀಸರು ತಿಳಿಸಿದ್ದಾರೆ.

ಸಿದ್ದಾಪುರ ಠಾಣೆಗೆ ತೆರಳಿರುವ ಕೆಲವರು ಡಿಕ್ಕಿ ಹೊಡೆದ ಕಾರಿನಲ್ಲಿದ್ದ ಎಲ್ಲ ಆರೋಪಿಗಳನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸರು ಧಾವಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT