ಹಲ್ಲೆ ಪ್ರಕರಣ: 42 ವರ್ಷ ನಂತರ ಆರೋಪಿ ಬಂಧನ

ವಿರಾಜಪೇಟೆ: 42 ವರ್ಷಗಳ ಹಿಂದೆ ನಡೆದ ಹೊಡೆದಾಟದ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸ್ಥಳೀಯ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
1978 ರಲ್ಲಿ ಸಮೀಪದ ಕಂಡಂಗಾಲದಲ್ಲಿ ಆರೋಪಿ ಬಿ. ಲಾಲು ಹಾಗೂ ಆತನ ತಂದೆ ಉತ್ತಪ್ಪ ಎಂಬುವವರು ಅದೇ ಗ್ರಾಮದ ನಾಣಯ್ಯ ಅವರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನಂತರ ತಂದೆ ಹಾಗೂ ಮಗ ಇಬ್ಬರು ತಲೆಮರೆಸಿಕೊಂಡಿದ್ದರು.
ಉತ್ತಪ್ಪ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಲಾಲು, ಈಚೆಗೆ ಕೈಲ್ ಮುಹೂರ್ತ ಹಬ್ಬಕ್ಕೆಂದು ಗ್ರಾಮಕ್ಕೆ ಬಂಧಿರುವ ಸುದ್ದಿ ತಿಳಿದು ಪೊಲೀಸರು ಬಂಧಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.