ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ; ಎಚ್ಚರಿಕೆ

Published 23 ಜೂನ್ 2024, 5:09 IST
Last Updated 23 ಜೂನ್ 2024, 5:09 IST
ಅಕ್ಷರ ಗಾತ್ರ

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಎಚ್ಚರಿಕೆ ನೀಡಿದರು.

ಪಿರಿಯಾಪ‍ಟ್ಟಣ, ಮಾಲ್ದಾರೆ, ಸಿದ್ದಾಪುರ, ಪಿರಿಯಾಪಟ್ಟಣ–ವಿರಾಜಪೇಟೆ ಮಾರ್ಗವಾಗಿ ರಾತ್ರಿ 12 ಗಂಟೆಯ ನಂತರ ವಾಹನ ಚಾಲನೆ ಮಾಡಬಾರದು. ಅಲ್ಲಿ ದರೋಡೆಕೋರರು ಇದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಸುದ್ದಿಯನ್ನು ಪರಿಶೀಲಿಸಿದಾಗ ಇದು ಸುಳ್ಳು ಸುದ್ದಿ ಎಂಬುದು ಖಚಿತವಾಯಿತು. ನಂತರ, ಈ ಸುದ್ದಿಯ ಹರಿಯಬಿಟ್ಟ ಇಬ್ಬರಿಗೆ ತಿಳಿವಳಿಕೆ ನೀಡಲಾಗಿದೆ.

ಇನ್ನು ಮುಂದೆ ಯಾವುದೇ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲಿಸದೇ ಬೇರೆಯವರಿಗೆ ಕಳುಹಿಸಬಾರದು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT