ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ: ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಸಲಹೆ

Published 20 ಫೆಬ್ರುವರಿ 2024, 2:58 IST
Last Updated 20 ಫೆಬ್ರುವರಿ 2024, 2:58 IST
ಅಕ್ಷರ ಗಾತ್ರ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿ ಮಾಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶ’ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಕುರಿತು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಆಯೋಜನೆಗೊಂಡಿರುವ ಈ ಮೇಳ ಕುರಿತು ಅಧಿಕಾರಿಗಳು ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲೆಡೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಬೃಹತ್ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆ ಹೊಂದಿರುವವರ ಜೊತೆ ಸಮಾಲೋಚನೆ ಮತ್ತು ಪೂರ್ವ ಸಂದರ್ಶನ ಏರ್ಪಡಿಸುವಂತೆಯೂ ಅವರು ಸಲಹೆ ನೀಡಿದರು.

ಕರಪತ್ರ ಮೂಲಕ ಎಲ್ಲೆಡೆ ಮಾಹಿತಿ ನೀಡಬೇಕು, ನಗರ ಸ್ಥಳೀಯ ಸಂಸ್ಥೆ ಮೂಲಕ ಮಾಹಿತಿ ನೀಡಬೇಕು, ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಹಕಾರ ಪಡೆದು ಹೆಚ್ಚಿನ ಮಾಹಿತಿ ನೀಡಬೇಕು, ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ, ಅಂಗನವಾಡಿ ಕಾರ್ಯಕರ್ತರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂಲಕ ಹೆಚ್ಚಿನ ಮಾಹಿತಿ ನೀಡಿ ಬೃಹತ್ ಉದ್ಯೋಗ ಮೇಳಕ್ಕೆ 1 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿಗೆ ಕ್ರಮ ವಹಿಸುವಂತೆ ಅವರು ಹೇಳಿದರು.

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಉಮಾ ಮಾತನಾಡಿ, ‘ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹಾಗೂ ರಾಜ್ಯದ ಎಲ್ಲಾ ವಲಯಗಳಿಂದ ಪ್ರತಿಷ್ಠಿತ ಬೃಹತ್, ಮಧ್ಯಮ ಮತ್ತು ಸಣ್ಣ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿವೆ’ ಎಂದರು.

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ, ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ.ರೂಪಾ, ಉದ್ಯೋಗ ಅಭಿವೃದ್ಧಿ ಅಧಿಕಾರಿ ಮದನ್ ಕುಮಾರ್ ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಹಲವು ಉದ್ಯೋಗದಾತ ಸಂಸ್ಥೆಗಳು ಪಾಲ್ಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ಉದ್ಯೋಗ ಮೇಳ ಸಂಬಂಧಿಸಿದಂತೆ https://skillconnect.kaushalkar.com ಸಹಾಯವಾಣಿ ಸಂಖ್ಯೆ 18005999918 (ವಿಸ್ತರಣಾ ಸಂಖ್ಯೆ -4) ನ್ನು ಸಂಪರ್ಕಿಸಬಹುದು. ಹಾಗೆಯೇ, ಉದ್ಯೋಗದಾತರು ಸಹ ಹೆಸರು ನೋಂದಣಿ ಮಾಡಬಹುದು ಎಂದು ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಪೌರಾಯುಕ್ತ ವಿಜಯ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಯಣ್ಣ, ಶಾಲಾ ಶಿಕ್ಷಣ ಇಲಾಖೆಯ ಕೃಷ್ಣಪ್ಪ ಭಾಗವಹಿಸಿದ್ದರು.

Highlights - ಸಹಾಯವಾಣಿ ಸಂಖ್ಯೆ 18005999918 https://skillconnect.kaushalkar.com ಮೂಲಕವೂ ಮಾಹಿತಿ ಪಡೆಯಬಹುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT