‘ವಿರೋಧ ಪಕ್ಷದವರೂ ಮಾತನಾಡಲಿ‘
ರಾಜ್ಯ ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಮಾತನಾಡಿ, ಮೀಸಲು ಅರಣ್ಯವನ್ನು ರೈತರು ಕೇಳುತ್ತಿಲ್ಲ. ಕೃಷಿ ಭೂಮಿಯಲ್ಲಿ ಮರಗಿಡಗಳನ್ನು ಬೆಳೆದು ಪರಿಸರಕ್ಕೆ ರೈತರು ಬಹುದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಆದರೆ ಪೈಸಾರಿ ಕೃಷಿ ಭೂಮಿಯನ್ನು ಮೀಸಲು ಅರಣ್ಯ ಮಾಡುವುದಕ್ಕೆ ಮುಂದಾದರೆ ದೊಡ್ಡ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಮಲೆನಾಡಿನ ರೈತರು ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮಲೆನಾಡು ಭಾಗದ ಶಾಸಕರುಗಳು ರಾಜಕೀಯ ಮರೆತು ರೈತರ ಪರವಾಗಿ ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು.
ವಿಧಾನಸಭಾ ಅಧಿವೇಶನದಲ್ಲಿ ಕೊಡಗಿನ ಶಾಸಕರು ರೈತರ ಸಂಕಷ್ಟದ ಬಗ್ಗೆ ಮಾತನಾಡಿದರೆ, ಮಲೆನಾಡಿನ ಶಾಸಕರು ಮೌನಕ್ಕೆ ಶರಣಾಗುವುದು ಸರಿಯಲ್ಲ. ವಿರೋಧ ಪಕ್ಷದವರು ಇದಕ್ಕು ನಮಗೂ ಸಂಬಂಧ ಇಲ್ಲ ಎಂಬಂತೆ ಇದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.