ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ: ಎಐಡಿಎಸ್ಓ ಒತ್ತಾಯ

Published 25 ನವೆಂಬರ್ 2023, 5:54 IST
Last Updated 25 ನವೆಂಬರ್ 2023, 5:54 IST
ಅಕ್ಷರ ಗಾತ್ರ

ಮಡಿಕೇರಿ: ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಎಐಡಿಎಸ್ಓನ  ಜಿಲ್ಲಾ ಸಂಚಾಲಕ ಸುಭಾಷ್ ಒತ್ತಾಯಿಸಿದ್ದಾರೆ.

ಸುಮಾರು 10 -15 ವರ್ಷಗಳಿಂದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವಾನಿರತರಾಗಿರುವ ಅತಿಥಿ ಉಪನ್ಯಾಸಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರವು ತಮ್ಮ ಸೇವಾ ಭದ್ರತೆ ಖಾತರಿಪಡಿಸುವಂತೆ ಹಾಗೂ ನಿಯಮಿತ ವೇತನಕ್ಕೆ ಆಗ್ರಹಿಸಿ ಅವರು ಪ್ರತಿಭಟಿಸುತ್ತಿದ್ದಾರೆ. ಆದರೆ, ಸರ್ಕಾರ ಅವರ ಬೇಡಿಕೆಯನ್ನು ಪರಿಗಣಿಸಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯಾಯಸಮ್ಮತವಾಗಿರುವ ಅವರ ಬೇಡಿಕೆಗಳನ್ನು ಈಡೇರಿಸಿ ಅತಿಥಿ ಉಪನ್ಯಾಸಕರಿಗೆ ಒಂದು ಗೌರವಯುತ ಜೀವನವನ್ನು ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿ ವಿಳಂಬ ನೀತಿ ಅನುಸರಿಸದೇ  ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಮತ್ತು ಈ ಮೂಲಕ ತರಗತಿಗಳು ನಡೆಯಲು ಅನುವು ಮಾಡಿಕೊಟ್ಟು ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT