ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಾವಿದರ ತಂಡಗಳ ನೋಂದಣಿಗೆ ಅವಕಾಶ

Published : 17 ಆಗಸ್ಟ್ 2024, 6:19 IST
Last Updated : 17 ಆಗಸ್ಟ್ 2024, 6:19 IST
ಫಾಲೋ ಮಾಡಿ
Comments

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಆಸಕ್ತ ಕಲಾವಿದರಿಂದ ಲಿಖಿತ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಮತ್ತು ಹೊರಭಾಗದ ಕೊಡವ ಸಾಂಸ್ಕೃತಿಕ ಕಲಾವಿದರು ಹಾಗೂ ಕಲಾತಂಡಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ.

ಕೊಡವ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಉಮ್ಮತ್ತಾಟ್, ಬೊಳಕಾಟ್, ಕೊಂಬಾಟ್, ಕಪ್ಪೆಯಾಟ್, ಚೌರಿಯಾಟ್, ಕೋಲಾಟ್, ಪರೆಯಕಳಿ, ಉರ್‍ಟಿಕೊಟ್ಟ್ ಆಟ್, ಬಿಲ್ಲಾಟ್, ಪೀಲಿಯಾಟ್, ಕಾಪಳಕಳಿ, ಕತ್ತಿಯಾಟ್, ದುಡಿಕೊಟ್ಟ್ ಪಾಟ್, ಒಯ್ಯ ಪಾಟ್, ಧೋಳ್‍ಪಾಟ್, ದೇವಡ ಪಾಟ್, ಕೊಡವ ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಸೇರಿದಂತೆ ಇತರ ಕಲಾವಿದರು ತಮ್ಮ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳ ವಿವರವನ್ನು ಅಕಾಡೆಮಿ ಕಚೇರಿಗೆ ಸೆ. 30ರೊಳಗೆ ಲಿಖಿತವಾಗಿ ತಲುಪಿಸಬಹುದು.

ನೋಂದಾಯಿತ ತಂಡಗಳಿಗೆ ಹಾಗೂ ಕಲಾವಿದರುಗಳಿಗೆ ಅಕಾಡೆಮಿಯ ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆಗಳ ಪ್ರದರ್ಶನ ಹಾಗೂ ಸ್ಪರ್ಧೆಯ ಅನಾವರಣಕ್ಕೆ ಆದ್ಯತೆಯನ್ನು ನೀಡಲಾಗುತ್ತದೆ. ಮಾಹಿತಿಗೆ ದೂ: 08272-229074, ಮೊ: 89719 58996 ಸಂಪರ್ಕಿಸಬಹುದು ಎಂದು ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT