ಸೋಮವಾರಪೇಟೆ: ಸಮೀಪದ ಮಸಗೋಡು-ತಣ್ಣೀರುಹಳ್ಳದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಆಂಗ್ಲ ಮಾಧ್ಯಮ ಎಲ್ ಕೆಜಿ ಯುಕೆಜಿ ತರಗತಿಗಳ ಮಕ್ಕಳಿಗೆ ಅನುಕೂಲವಾಗುವಂತೆ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಸ್ಥಳೀಯರಾದ ಪೂವಪ್ಪ ಹಾಗೂ ಲೀಲಾವತಿ ದಂಪತಿ ಪುತ್ರ ಬಿ.ಪಿ. ರವಿ ಅವರು ₹4 ಲಕ್ಷ ವೆಚ್ಚದಲ್ಲಿ ವಾಹನವನ್ನು ಉಚಿತವಾಗಿ ಒದಗಿಸಿದರು.

ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ವಾಹನವನ್ನು ಬರಮಾಡಿಕೊಂಡರು. ಶಾಲಾ ವಿದ್ಯಾರ್ಥಿಗಳ ಅಗತ್ಯವಾಗಿರುವ ವಾಹನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಅವರು ಹಸಿರು ನಿಶಾನೆ ತೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಸಿ. ತಿಮ್ಮಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಕುಮಾರ್, ಇಂಗ್ಲಿಷ್ ಮಾಧ್ಯಮ ಶಾಲಾ ಸ್ಥಾಪನಾ ಸಮಿತಿ ಅಧ್ಯಕ್ಷ ಟಿ.ಕೆ. ಲೋಕಾನಂದ, ಗ್ರಾ.ಪಂ. ಉಪಾಧ್ಯಕ್ಷೆ ಜಲಜಾ ದಿನೇಶ್, ಸದಸ್ಯರಾದ ಅಶ್ವಿನಿ, ಕವಿತಾ, ಪ್ರವೀಣ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಫೀಕ್, ಸದಸ್ಯರಾದ ಅಬ್ದುಲ್ ಶಾಲಿ, ಹಬೀಬ್, ಹರೀಶ್, ಪ್ರವೀಣ್, ರೇವತಿ ಸೇರಿದಂತೆ ಪೋಷಕರು, ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.