ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಜಿಲ್ಲೆಯ ವಿವಿಧೆಡೆ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

Published 8 ಡಿಸೆಂಬರ್ 2023, 3:07 IST
Last Updated 8 ಡಿಸೆಂಬರ್ 2023, 3:07 IST
ಅಕ್ಷರ ಗಾತ್ರ

ಮಡಿಕೇರಿ: ಪ್ರೊ.ಬಿ.ಕೃಷ್ಣಪ್ಪ ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಕೊಡಗು ಜಿಲ್ಲೆಯ ಎಲ್ಲಾ ತಾಲೂಕು ಸಮಿತಿಗಳ ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು.

ವಿರಾಜಪೇಟೆ ತಾಲ್ಲೂಕು ಸಮಿತಿ ವತಿಯಿಂದ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ, ತಾಲ್ಲೂಕು ಸಮಿತಿ ಸಂಚಾಲಕ ಮನು ಚೆನ್ನಯ್ಯನಕೋಟೆ, ಹಿರಿಯ ಮುಖಂಡರಾದ ಕೆ.ಪಳನಿ ಪ್ರಕಾಶ್, ಸಮಾಜ ಸೇವಕಿ ಸುನಿತಾ ಸುಧಾಕರ್, ಜಿಲ್ಲಾ ಸಂಘಟನಾ ಸಂಚಾಲಕರಾದ ಬಾವ ಮಾಲ್ದಾರೆ ಮತ್ತು ಬೋಜ, ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ರೇಖಾ ಮಹೇಶ್, ಕೆದಮುಳ್ಳೂರು ಗ್ರಾಮ ಸಂಚಾಲಕ ರಘು ಭಾಗವಹಿಸಿದ್ದರು.

ಮಹಿಳಾ ಒಕ್ಕೂಟದ ಜಿಲ್ಲಾ ಸಂಘಟನಾ ಸಂಚಾಲಕಿ ಪದ್ಮಾವತಿ ಅವರ ನೇತೃತ್ವದಲ್ಲಿ ಕುಶಾಲನಗರ ಕಾವೇರಿ ತಾಲ್ಲೂಕು ಸಮಿತಿಯ ತಾಲ್ಲೂಕು ಸಂಚಾಲಕ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಆಚರಿಸಲಾಯಿತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಮನೋಜ್ ಕುಮಾರ್ ಅವರ ನೇತೃತ್ವದಲ್ಲಿ ಸದಸ್ಯರು ಬಸ್ ನಿಲ್ದಾಣದ ಆವರಣದಲ್ಲಿ ಮೋಂಬತ್ತಿ ಬೆಳಗಿ ಆಚರಿಸಿದರು.

ಮಡಿಕೇರಿ ತಾಲ್ಲೂಕಿನಲ್ಲಿ, ಜಿಲ್ಲಾ ಖಜಾಂಜಿ ರಾಮಚಂದ್ರ ಅವರ ನೇತೃತ್ವದಲ್ಲಿ ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ಗೌರಮ್ಮ ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾ ಸಂಘಟನಾ ಸಂಚಾಲಕಿ ಭಾಗ್ಯವತಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆಯನ್ನು ಆಚರಿಸಿದರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT