ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದವರು ಅಂಬೇಡ್ಕರ್ - ವೆಂಕಟ್ ರಾಜಾ

ಜಿಲ್ಲಾಧಿಕಾರಿ ವೆಂಕಟರ್‌ರಾಜಾ ‍ಪ್ರತಿಪಾದನೆ; ಕೊಡಗಿನೆಲ್ಲೆಡೆ ಅಂಬೇಡ್ಕರ್ ಜನ್ಮದಿನಾಚರಣೆ,
Published 15 ಏಪ್ರಿಲ್ 2024, 4:13 IST
Last Updated 15 ಏಪ್ರಿಲ್ 2024, 4:13 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಎಲ್ಲೆಡೆ ಭಾನುವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಲ್ಲಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ‘ಸಮ ಸಮಾಜ ನಿರ್ಮಾಣಕ್ಕಾಗಿ ಅಂಬೇಡ್ಕರ್ ಅವರು ಅಪಾರ ಶ್ರಮಪಟ್ಟಿದ್ದರು’ ಎಂದು ಹೇಳಿದರು.

ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಅರಿತು ಅವುಗಳನ್ನು ಪಾಲಿಸಬೇಕು.
ಡಾ.ಬಿ.ಆರ್‌ ಅಂಬೇಡ್ಕರ್‌ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಪ್ರತಿಯೊಬ್ಬರೂ ನಡೆಯುವ ಮೂಲಕ ಯುವಕರು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಕರೆ‌ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ ಮಾತನಾಡಿ, ಸರ್ವ ಜನಾಂಗದ ಅಭಿವೃದ್ಧಿಗಾಗಿ ಹಗಲಿರುಳು ನಿರಂತರ ಕೆಲಸ ಮಾಡಿದವರು ಡಾ.ಅಂಬೇಡ್ಕರ್. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಇದೇ ವೇಳೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.

ಉಪವಿಭಾಗಾಧಿಕಾರಿ ವಿನಾಯಕ ನಾರ್ವಡೆ, ನ್ಯಾಯವಾದಿ ರಾಜಶೇಖರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ, ತಹಶೀಲ್ದಾರ್ ರಮೇಶಬಾಬು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ ಭಾಗವಹಿಸಿದ್ದರು.

ಮಡಿಕೇರಿಯ ಗಾಂಧಿ ಭವನದಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ ಉಪವಿಭಾಗಾಧಿಕಾರಿ ವಿನಾಯಕ ನಾರ್ವಡೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಹಶೀಲ್ದಾರ್ ರಮೇಶ್‌ಬಾಬು ಭಾಗವಹಿಸಿದ್ದರು

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾನುವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ಜಯಂತಿಯ ಆಚರಣೆ ಕಾರ್ಯಕ್ರಮದಲ್ಲಿ  ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ ಮಾತನಾಡಿದರು.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾನುವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ಜಯಂತಿಯ ಆಚರಣೆ ಕಾರ್ಯಕ್ರಮದಲ್ಲಿ  ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ ಮಾತನಾಡಿದರು.

‘ನವ ಭಾರತದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್’

ಮಡಿಕೇರಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ನವ ಭಾರತದ ನಿರ್ಮಾತೃ. ಅವರ ಚಿಂತನೆಗಳು ಆಧುನಿಕ ಭಾರತವನ್ನು ರೂಪಿಸಿದೆ ಎಂದು ಇಲ್ಲಿನ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ ಪ್ರತಿಪಾದಿಸಿದರು. ಕಾಲೇಜಿನಲ್ಲಿ ಭಾನುವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ಜಯಂತಿಯ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಚಿಂತನೆಗಳು ಸಾಮಾಜಿಕ ರಾಜಕೀಯ ಶೈಕ್ಷಣಿಕ ಅರ್ಥಿಕ ವಲಯಗಳ ಸಮಷ್ಟಿ ಕ್ರಾಂತಿಗೆ ಕಾರಣವಾಗಿದೆ. ಅವರಂತೆ ಶಿಕ್ಷಣವನ್ನು ಹುಲಿಯ ಹಾಲಿನ ಮೇವಾಗಿಸಿಕೊಂಡು ಘನತೆಯ ಬದುಕನ್ನು ಕಟ್ಟಿಕೊಳ್ಳುವ ಕಡೆಗೆ ನಾವೆಲ್ಲರೂ ಮುನ್ನೆಡೆಯಬೇಕಾಗಿದೆ ಎಂದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ತಿಪ್ಪೇಸ್ವಾಮಿ ಸ್ನಾತಕೋತ್ತರ ಕೊಡವ ಭಾಷಾ ವಿಭಾಗದ ಸಂಯೋಜಕ ರವಿಶಂಕರ್ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಜೆ.ಜಿ.ಮಂಜುನಾಥ್ ಕನ್ನಡ ವಿಭಾಗದ ಅತಿಥಿ ಉಪನ್ಯಾಸಕ ಎಚ್.ಡಿ.ಮುಖೇಶ್ ಗಣಿತ ವಿಭಾಗದ ಮುಖ್ಯಸ್ಥ ಡಾ.ಆರ್.ರಾಜೇಂದ್ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಡಾ.ರೇಣು ಶ್ರೀ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT