ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂಟಿಕೊಪ್ಪ: ವಾರ್ಷಿಕ ಪೂಜೋತ್ಸವ ಸಂಭ್ರಮ

Published 31 ಜನವರಿ 2024, 3:00 IST
Last Updated 31 ಜನವರಿ 2024, 3:00 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ಸಮೀಪದ ಬೋಯಿಕೇರಿಯಲ್ಲಿ ನೆಲೆಗೊಂಡಿರುವ ಸಿದ್ಧಿ ಬುದ್ಧಿ ವಿನಾಯಕ ದೇವಾಲಯದ ಎಂಟನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಸೋಮವಾರ ವಿಜ್ರಂಭಣೆಯಿಂದ‌ ನಡೆಯಿತು.

ಬೆಳಿಗ್ಗೆ ಸ್ಥಳ ಶುದ್ದಿ, ಪುತ್ಸಾಹ ವಾಚನ, ನವಕಲಶ ಪೂಜೆ, 108 ತೆಂಗಿನ ಕಾಯಿಯ ಮಹಾಗಣಪತಿ ಹೋಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿದ ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಮಡಿಕೇರಿ, ಕೆದಕಲ್, ಬೋಯಿಕೇರಿ, ಹಾಲೇರಿ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT