ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.29ರಂದು ಅನ್ನಭಾಗ್ಯ ದಶಮಾನೋತ್ಸವಕ್ಕೆ ಕೊಡಗು ಜಿಲ್ಲೆಯಿಂದ ಸಾವಿರ ಜನ

Published 27 ಫೆಬ್ರುವರಿ 2024, 13:20 IST
Last Updated 27 ಫೆಬ್ರುವರಿ 2024, 13:20 IST
ಅಕ್ಷರ ಗಾತ್ರ

ಕುಶಾಲನಗರ: ‘ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. 29 ರಂದು ಆಹಾರ ನಾಗರಿಕ ಸರಬರಾಜು ನಿಗಮದ ಸುವರ್ಣ ಮಹೋತ್ಸವ, ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ, ಪಡಿತರ ವಿತರಕರ ಸಮಾವೇಶ ನಡೆಯಲಿದ್ದು, ಕೊಡಗು ಜಿಲ್ಲೆಯಿಂದ ಒಂದು ಸಾವಿರಕ್ಕೂ ಹೆಚ್ಚು ಪಡಿತರ ಗ್ರಾಹಕರು ಹಾಗೂ ವಿತರಕರು ಪಾಲ್ಗೊಳ್ಳಲಿದ್ದಾರೆ’ ಎಂದು ಕುಶಾಲನಗರ ತಾಲ್ಲೂಕು ಪಡಿತರ ವಿತರಕರ ಸಂಘದ ಅಧ್ಯಕ್ಷ ಕೆ.ಎನ್.ಅಶೋಕ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಪಡಿತರ ವಿತರಕರ ಸಂಘ ಹಾಗೂ ವಿಎಸ್ಎಸ್ಎನ್ ಕಾರ್ಯದರ್ಶಿಗಳು ಒಂದು ನ್ಯಾಯಬೆಲೆ ಅಂಗಡಿ ವ್ಯಾಪ್ತಿಯ 5 ಮಂದಿ ಪಡಿತರ ಗ್ರಾಹಕರನ್ನು ಕರೆ ತರಬೇಕು’ ಎಂದು ಮನವಿ ಮಾಡಿದರು.

‘ಕಾರ್ಯಕ್ರಮ ತೆರಳಲು ಅನುಕೂಲವಾಗುವಂತೆ ಕುಶಾಲನಗರ ತಾಲ್ಲೂಕಿಗೆ ಉಚಿತ ಬಸ್ ಸೌಲಭ್ಯ ‌ಕಲ್ಪಿಸಿ ಕೊಟ್ಟಿರುವ ಶಾಸಕ ಡಾ.ಮಂತರ್ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಎಲ್ಲಾ ಪಡಿತರ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ‌ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅರುಣ್ ಚಂದ್ರ, ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್, ಸಹ ಕಾರ್ಯದರ್ಶಿ ವರದರಾಜ್ ದಾಸ್, ನಿರ್ದೇಶಕ ಹೆಬ್ಬಾಲೆ ಎಚ್.ಸಿ. ಹರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT