ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಕೋವಿಡ್‌ಗೆ ಮತ್ತೊಂದು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

Last Updated 29 ಜುಲೈ 2020, 13:26 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ನಿಂದ ಬುಧವಾರ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7ಕ್ಕೇರಿದೆ.

ಮಡಿಕೇರಿಯಲ್ಲಿ ವ್ಯಾಪಾರ ವೃತ್ತಿ ನಡೆಸುತ್ತಿದ್ದ ಅವರಿಗೆ 38 ವರ್ಷವಾಗಿತ್ತು. ಜುಲೈ 21ರಂದು ಜ್ವರ ಕಾಣಿಸಿಕೊಂಡಿದ್ದು, ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೂ ಗುಣವಾಗಿರಲಿಲ್ಲ.

ಬಳಿಕ ತೀವ್ರವಾದ ಜ್ವರ, ಕೆಮ್ಮು ಮತ್ತು ಸುಸ್ತು ಕಾಣಿಸಿಕೊಂಡಿದ್ದರಿಂದ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ 26ರಂದು ದಾಖಲಾಗಿದ್ದರು. ಇವರ ಗಂಟಲು, ಮೂಗು ದ್ರವ ಮಾದರಿ ಪರೀಕ್ಷಿಸಿದ್ದು ಕೋವಿಡ್ ಸೋಂಕು ದೃಢಪಟ್ಟಿತ್ತು.

ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT