ಭಾನುವಾರ, ಸೆಪ್ಟೆಂಬರ್ 19, 2021
29 °C

ಸಚಿವ ಸ್ಥಾನಕ್ಕೆ ಆಗ್ರಹ: ಸಿಎಂ ಭೇಟಿಗೆ ಬೆಂಗಳೂರಿನತ್ತ ಹೊರಟ ರಂಜನ್‌ ಬೆಂಬಲಿಗರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ (ಕೊಡಗು): ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅವರ ಬೆಂಬಲಿಗರು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ಕುಶಾಲನಗರದಲ್ಲಿ ಚಲೋಗೆ ಚಾಲನೆ ಸಿಕ್ಕಿತು. 

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಜಿಲ್ಲೆಗೆ ಅನ್ಯಾಯವಾಗಿದೆ. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ನಮ್ಮ ಮನವಿ ಸಲ್ಲಿಸುತ್ತೇವೆ’ ಎಂದು ಬೆಂಬಲಿಗರು ಹೇಳಿದರು.

ಕುಶಾಲನಗರ ಬೈಚನಹಳ್ಳಿ ಮಾರಿಯಮ್ಮ ದೇವಾಲಯದ ಬಳಿಯಿಂದ ಈ ಜಾಥಾ ಆರಂಭಗೊಂಡಿತು. ಕುಶಾಲನಗರ ತಾಲ್ಲೂಕಿನ ಪಕ್ಷದ ಮುಖಂಡರು, ರಂಜನ್‌ ಅಭಿಮಾನಿಗಳು, ಪಟ್ಟಣ ಪಂಚಾಯಿತಿ ಸದಸ್ಯರು ಕಾರುಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು