ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರೀಡಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Published 1 ಸೆಪ್ಟೆಂಬರ್ 2024, 3:01 IST
Last Updated 1 ಸೆಪ್ಟೆಂಬರ್ 2024, 3:01 IST
ಅಕ್ಷರ ಗಾತ್ರ

ಮಡಿಕೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಹಿರಿಯ ಕ್ರೀಡಾಪಟು, ತರಬೇತುದಾರರಾಗಿ ಸಾಧನೆ ಮಾಡಿರುವವರಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲು ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

2023 ನೇ ಸಾಲಿನ ಹಿರಿಯ ಕ್ರೀಡಾಪಟು, ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ಪ್ರಶಸ್ತಿಗೆ ಸೇವಾಸಿಂಧು ಆನ್‍ಲೈನ್ ವೆಬ್‍ಸೈಟ್ http://sevasindhuservices.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಸೆ.20 ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ: 08272-220986 ಮತ್ತು ಮೊ: 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT