ಮಡಿಕೇರಿ: ಮೈಸೂರಿನ ತಿಲಕ್ ನಗರದಲ್ಲಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2 ವರ್ಷಗಳ ವಿಶೇಷ ಡಿ.ಇಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಈ ವಿಶೇಷ ಡಿ.ಇಡಿ ಕಾರ್ಯಕ್ರಮಗಳು ಸಾಮಾನ್ಯ ಡಿ.ಇಡಿಗೆ ಸಮಾನವಾಗಿವೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 50 (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ 45) ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಜೂನ್ 10 ರೊಳಗೆ ಅರ್ಜಿ ಸಲ್ಲಿಸಬಹುದು.

ಈ ತರಬೇತಿಗೆ ಸಂಬಂಧಿಸಿದ ವಿವರವಾದ ಮಾಹಿತಿ ಹಾಗೂ ಅರ್ಜಿ ನಮೂನೆ ಮೈಸೂರು ಜಿಲ್ಲಾ ವೆಬ್ಸೈಟ್ನಲ್ಲಿ ಲಭ್ಯವಿದೆ. ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಿಸುವ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು, ಅಂಧ ಮಕ್ಕಳ ಬೋಧಕರ ತರಬೇತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಬೋಧನಾ ಶುಲ್ಕ ಇರುವುದಿಲ್ಲ.

ಮಾಹಿತಿಗೆ ಉಪ ನಿರ್ದೇಶಕರು (ತರಬೇತಿ) ಸರ್ಕಾರಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ತಿಲಕ್ನಗರ, ಮೈಸೂರು ದೂ: 0821-2491600, 2959600, ಮೊ:9113561620 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.