ಮಡಿಕೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಈ ಕಚೇರಿಯಿಂದ ಪಡೆದು ಸೆ.13 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.
ಮಾಹಿತಿಗೆ ದೂ: 08272-220986 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.