ನಾಪೋಕ್ಲು: ‘ಎಲೆಮರೆ ಕಾಯಿಯಂತಿರುವ ಸಾಹಿತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಾಹಿತ್ಯ ಪರಿಷತ್ ಮಾಡಬೇಕಿದೆ’ ಎಂದು ಮೂರ್ನಾಡು ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಚೌರೀರ ಡಾ. ಜಗತ್ ತಿಮ್ಮಯ್ಯ ಹೇಳಿದರು.
ಮೂರ್ನಾಡು ಪದವಿ ಪೂರ್ವ ಕಾಲೇಜು ಆವರಣದ ಕಾವೇರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಮಡಿಕೇರಿ ತಾಲ್ಲೂಕು ಮತ್ತು ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಮೂರ್ನಾಡು ಕಸಾಪ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ, ‘ಸಂಚಾರ ನಿಯಮ ಮತ್ತು ಕಾನೂನು’ ವಿಷಯ ಕುರಿತು ಉಪನ್ಯಾಸ ನೀಡಿದರು.
ಜಾನಪದ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅನಂತಶಯನ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಸಾಹಿತಿ ಟಿ.ಪಿ. ರಮೇಶ್ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ನೂತನ ಅಧ್ಯಕ್ಷೆ ಹರಿಣಿ ವಿಜಯ್, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.
ಸಾಹಿತಿ ಗೌರಮ್ಮ ಮಾದಮಯ್ಯ ಅವರು ಬರೆದ ವಿಷಯ ಸಂಕಲನ ಕೃತಿ ಲೋಕಾರ್ಪಣೆ ಮಾಡಲಾಯಿತು.
ಜಿಲ್ಲಾ ಘಟಕದ ಕಾರ್ಯದರ್ಶಿ ಎಸ್.ಐ ಮುನೀರ್ ಆಹ್ಮದ್, ಕೋಶಾಧಿಕಾರಿ ಎಂ.ಎಸ್. ಸಂಪತ್ ಕುಮಾರ್, ನಿರ್ದೇಶಕ ಮಂಜುನಾಥ್, ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ, ಸಾಹಿತಿ ಪಿ.ಪಿ. ಸುಕುಮಾರ್ ಇದ್ದರು.
ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.