ಸಂಪಾಜೆಯಲ್ಲಿ ಸಭೆ: 129 ಅರ್ಜಿ ಸಲ್ಲಿಕೆ

7

ಸಂಪಾಜೆಯಲ್ಲಿ ಸಭೆ: 129 ಅರ್ಜಿ ಸಲ್ಲಿಕೆ

Published:
Updated:

ಮಡಿಕೇರಿ: ಸಂಪಾಜೆಯ ವಿಎಸ್ಎಸ್ಎನ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸುಮಾರು 129 ಅರ್ಜಿಗಳು ಸಲ್ಲಿಕೆಯಾದವು.

ವ್ಯಾಪಕ ಮಳೆಯಿಂದ ಮನೆ ಹಾನಿ, ರಸ್ತೆ ಮತ್ತು ಸೇತುವೆಗೆ ಹಾನಿಯಾಗಿದ್ದು ಇದನ್ನು ಮರು ನಿರ್ಮಾಣ ಮಾಡಬೇಕು. ಕುಡಿಯುವ ನೀರು ಒದಗಿಸಬೇಕು. ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, ಸೂಕ್ತ ಪರಿಹಾರ ವಿತರಿಸುವಂತಾಗಬೇಕು ಎಂದು ಸಾರ್ವಜನಿಕರು ಮನವಿ ಮಾಡಿದರು.

ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಅರ್ಜಿಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ತುರ್ತು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು. ಕೃಷಿ, ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಶ್ರೀವಿದ್ಯಾ ತಿಳಿಸಿದರು.

ತಹಶೀಲ್ದಾರ್ ಕುಸುಮಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !