ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅರಮಣಮಾಡ ಕ್ರಿಕೆಟ್ ಟೂರ್ನಿಗೆ ಚಾಲನೆ ಇಂದು

ಮೇ 19 ರವರೆಗೆ ನಡೆಯಲಿರುವ ಟೂರ್ನಿ, 313 ತಂಡಗಳು ಭಾಗಿ
Published 21 ಏಪ್ರಿಲ್ 2024, 5:59 IST
Last Updated 21 ಏಪ್ರಿಲ್ 2024, 5:59 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಬಾಳೆಲೆ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಏ.21ರಿಂದ ಕೊಡವ ಕೌಟುಂಬಿಕ ಹಾಕಿ ಟೂರ್ನಿ ಆರಂಭಗೊಳ್ಳಲಿದೆ. ಇದಕ್ಕಾಗಿ ಸಿದ್ಧತೆಗಳು ಪೂರ್ಣಗೊಂಡಿವೆ. ಭಾನುವಾರ ಬೆಳಿಗ್ಗೆ ಟೂರ್ನಿಗೆ ಚಾಲನೆ ದೊರಕಲಿದೆ.

ಮೇ 19 ರವರೆಗೆ ನಡೆಯಲಿರುವ ಟೂರ್ನಿಯಲ್ಲಿ 313 ತಂಡಗಳು ಪಾಲ್ಗೊಳ್ಳಲಿವೆ. ಇದೇ ಮೊದಲ ಬಾರಿಗೆ ಕೊಡವ ಕುಟಂಬದ 49 ಮಹಿಳಾ ತಂಡಗಳು ಟೂರ್ನಿಯಲ್ಲಿ ಸೆಣೆಸಾಡಲಿವೆ. ಪುರುಷ ಮತ್ತು ಮಹಿಳಾ ತಂಡಗಳು ಪ್ರತ್ಯೇಕ ವಿಭಾಗದಲ್ಲಿ ನಡೆಯಲಿವೆ. ಇದಕ್ಕಾಗಿ ಬಾಳೆಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನವನ್ನು ಬಳಸಿಕೊಳ್ಳಲಾಗುತ್ತಿದೆ.

ಉದ್ಘಾಟನಾ ಸಮಾರಂಭದ ಬಳಿಕ ಉತ್ತರ ಮತ್ತು ದಕ್ಷಿಣ ಭಾಗದ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ. ಪುರುಷರ ವಿಭಾಗದ ವಿಜೇತ ತಂಡಕ್ಕೆ ₹ 2.5 ಲಕ್ಷ ಹಾಗೂ ಮಹಿಳಾ ವಿಜೇತ ತಂಡಕ್ಕೆ ₹ 1 ಲಕ್ಷ ನಗದು ಬಹುಮಾನ ನೀಡಲಾಗುತ್ತಿದೆ.

ಬೆಳಿಗ್ಗೆ 8 ಗಂಟೆಗೆ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಹೊರಡಲಿದೆ. ನಂತರ, ಮೆರವಣಿಗೆ ಮೈದಾನ ತಲುಪಿ ಧ್ವಜಾರೋಹಣ ನೆರವೇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT