ಭಾನುವಾರ, ಸೆಪ್ಟೆಂಬರ್ 19, 2021
24 °C

ಯೋಧನ ಕುಟುಂಬದ ಮೇಲೆ ಹಲ್ಲೆ ಪ್ರಕರಣ: ಜೆಡಿಎಸ್‌ ಮುಖಂಡ ಸೇರಿ ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಡಗು: ಜೆಡಿಎಸ್‌ ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್‌ ಖಾನ್‌, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ರಫೀಕ್‌ ಖಾನ್ ಹಾಗೂ ನಾಸೀರ್‌ ಬಂಧಿತರು. ಎಲ್ಲರೂ ಸುಂಟಿಕೊಪ್ಪದವರು.

ಭಾನುವಾರ ರಾತ್ರಿ, ಕುಶಾಲನಗರದಿಂದ ಕಾರಿನಲ್ಲಿ ಮಡಿಕೇರಿಗೆ ಬರುತ್ತಿದ್ದ ಯೋಧ ಅಶೋಕ್ ಕುಮಾರ್‌ ಹಾಗೂ ಅವರ ಕುಟುಂಬದ ಮೇಲೆ ಬಂಧಿತರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಯೋಧನ ಕುಟುಂಬದ ಸದಸ್ಯರು ಮಡಿಕೇರಿ ಅಶ್ವಿನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು