ಶನಿವಾರ, ಸೆಪ್ಟೆಂಬರ್ 25, 2021
29 °C

ಯೋಧನ ಮೇಲೆ ಹಲ್ಲೆ ಪ್ರಕರಣ: ಮಡಿಕೇರಿಯಲ್ಲಿ ಮಾಜಿ ಸೈನಿಕರ ಬೃಹತ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಯೋಧ ಅಶೋಕ್ ಕುಮಾರ್ ಹಾಗೂ ಅವರ ಕುಟುಂಬದ ಮೇಲೆ ಹಲ್ಲೆ ಖಂಡಿಸಿ, ನಗರದಲ್ಲಿ ಶುಕ್ರವಾರ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆ ಎಬಿವಿಪಿ ಹಾಗೂ ಹಿಂದೂ ಜಾಗರಣಾ ವೇದಿಕೆಯು ಬೆಂಬಲ ಸೂಚಿಸಿದೆ. ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ.

ಜುಲೈ 26ರಂದು ಕುಶಾಲನಗರದಿಂದ ಮಡಿಕೇರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಯೋಧನ ಕಾರಿಗೆ, ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿಯಾಗಿತ್ತು. ಆಗ ಪರಸ್ಪರ ವಾಗ್ವಾದವಾಗಿ ಗಲಾಟೆ ನಡೆದಿತ್ತು. ಆಗ, ಸೈನಿಕ ಕುಟುಂಬದ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪವಿದೆ. ಐವರು ಆರೋಪಗಳನ್ನು ಬಂಧಿಸಲಾಗಿತ್ತು. ಮೂವರು ಜಾಮೀನನ ಮೇಲೆ ಬಿಡುಗಡೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು