ಮಡಿಕೇರಿ: ಗಾಂಧಿ ಭವನದ ಸಭಾಂಗಣ ಭಾನುವಾರ ಗುಲಾಬಿ ಬಣ್ಣಕ್ಕೆ ತಿರುಗಿತ್ತು. ಸಭಾಂಗಣ ಮಹಿಳೆಯರಿಂದ ಸಂಪೂರ್ಣ ತುಂಬಿತ್ತು. 13 ಮಳಿಗೆಗಳಲ್ಲಿ ಮಹಿಳೆಯರು ತಾವೇ ತಯಾರಿಸಿದ ವಸ್ತುಗಳನ್ನು ಮಾರಾಟಕ್ಕಿರಿಸಿದ್ದರು.

ಈ ದೃಶ್ಯಗಳು ಇಲ್ಲಿನ ಗಾಂಧಿ ಭವನದಲ್ಲಿ ಭಾನುವಾರ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕಂಡು ಬಂತು.

ಮುಖ್ಯ ಭಾಷಣ ಮಾಡಿದ ಲೇಖಕಿ ಸ್ಮಿತಾ ಅಮೃತರಾಜ್, ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಜ್ಞಾನ, ನಿರ್ಧಾರ ಕೈಗೊಳ್ಳುವ ಶಕ್ತಿ ಹಾಗೂ ಸಾಮಾಜಿಕ ಬೆಂಬಲವೂ ಬೇಕು. ಆಗ ಮಾತ್ರ ಆರ್ಥಿಕ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ’ ಎಂದು ತಿಳಿಸಿದರು.

ಮಹಿಳಾ ದಿನಾಚರಣೆ ಎಂದರೆ ಅದು ಸಂಭ್ರಮಿಸಲು ಹಾಗೆ ನೀಡಿದ ದಿನವಲ್ಲ. 20ನೇ ಶತಮಾನದ ಆರಂಭದಲ್ಲಿ ಮಹಿಳಾ ಕಾರ್ಮಿಕರು ಉತ್ತಮ ವೇತನ, ಕಡಿಮೆ ಕೆಲಸದ ಅವಧಿ ಮತ್ತು ಮತದಾನದ ಹಕ್ಕಿಗಾಗಿ ನಡೆಸಿದ ಬೃಹತ್ ಹೋರಾಟಗಳ ಫಲವಾಗಿ ಈ ದಿನಾಚರಣೆ ಬಂದಿದೆ ಎಂದರು

ಅನಾದಿ ಕಾಲದಿಂದಲೂ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸಿ ಕಡೆಗಣಿಸಲಾಗುತ್ತಿದೆ. ಆದರೂ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯದಿಂದ ಸಬಲೀಕರಣಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಮಹಿಳೆಯರಿಗೆ ಅಕ್ಷರದ ವಾರಸುದಾರಿಕೆ ಕೊಟ್ಟಂತ ಶ್ರೇಯಸ್ಸು ಸಾವಿತ್ರಿ ಬಾಪುಲೆ ಅವರಿಗೆ ಸಲ್ಲುತ್ತದೆ. ಮಹಿಳಾ ಸಮಾಜಕ್ಕೆ ಇದ್ದ ಧಾರ್ಮಿಕ ಕಟ್ಟುಪಾಡುಗಳ ವಿರೋಧದ ನಡುವೆ ಅಕ್ಷರವನ್ನು ಬಿತ್ತಿ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದವರು ಸಾವಿತ್ರಿ ಬಾಯಿಪುಲೆ ಎಂದು ಹೇಳಿದರು.

ಮಹಿಳೆಯರನ್ನು ಗೌರವಿಸುವ ಕಾರ್ಯ ಸಮಾಜ ಮಾಡಬೇಕಿದೆ. ಮಹಿಳೆಯರಿಗೆ ಶಿಕ್ಷಣ, ಉದ್ಯೋಗಾವಕಾಶಗಳಲ್ಲಿ ಸಮಾನವಕಾಶಗಳನ್ನು ನೀಡಬೇಕು. ಮಹಿಳೆಯರು ಸಹ ಇಂದು ವೃತ್ತಿ ಜೀವನದಲ್ಲಾಗಲೀ, ಇತರ ರಂಗಗಳಲ್ಲಾಗಲೀ ಅವಕಾಶಗಳು ಬಂದಾಗ ಕೀಳರಿಮೆಯಿಂದ ಹಿಂದೆ ಸರಿಯದೆ ಪ್ರತಿಯೊಂದನ್ನು ಸವಾಲಾಗಿ ಸ್ವೀಕರಿಸಬೇಕು ಎಂದರು.

ಮಡಿಕೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಮಾತನಾಡಿ, ‘ನಮ್ಮ ದೇಶದ ಸಂಸ್ಕೃತಿಯಲ್ಲಿ ಅನಾದಿಕಾಲದಿಂದಲೂ ಮಹಿಳೆಯರಿಗೆ ಉನ್ನತ ಸ್ಥಾನಮಾನ ನೀಡಲಾಗಿದೆ. ಅದರಂತೆ ಎಲ್ಲಾ ನಾರಿಯರನ್ನು ಗೌರವದಿಂದ, ಹಕ್ಕು, ಸ್ಥಾನಮಾನ ನೀಡಿ ತೃಪ್ತಿ ಪಡಿಸಿದರೆ ಈ ದೇಶ, ರಾಜ್ಯ ಸಮೃದ್ಧಿಯಾಗುತ್ತದೆ’ ಎಂದು ಹೇಳಿದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರಾಣಿ ಮಾತನಾಡಿ, ಮಹಿಳೆಯರು ಅಬಲೆಯರಲ್ಲ, ಸಬಲೆಯರು. ಪುರುಷರಂತೆ ಮಹಿಳೆಯರು ಕೂಡ ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲೂ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮಡಿಕೇರಿ ತಾಲ್ಲೂಕಿನ 26 ಸಂಜೀವಿನ ಒಕ್ಕೂಟಗಳಿಗೆ ಗೌರವ ಸಮರ್ಪಿಸಲಾಯಿತು.

ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಎಂ.ಜಿ.ಸುನಿತಾ, ಎಸ್.ಎಸ್.ಹೇಮಂತ್, ರಮ್ಯ ಮೂರ್ನಾಡು, ಚೆಂಬು ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟದ ಸದಸ್ಯೆ ರೇಖಾ, ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅದಿಕಾರಿ ವತ್ಸಲಾ ಕುಮಾರಿ , ಮೂಕಾಂಬಿಕ ಸಂಜೀವಿನಿ ಒಕ್ಕೂಟದ ಕನಕಾಂಬಿಕೆ ಭಾಗವಹಿಸಿದ್ದರು.

ಸಂಜೀವಿನಿ ಒಕ್ಕೂಟದ 13 ಮಳಿಗೆಗಳು ಅಲ್ಲಿದ್ದವು. ಅವುಗಳಲ್ಲಿ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳು ಮತ್ತಿತರ ಉತ್ಪನ್ನಗಳು ಗಮನ ಸೆಳೆದವು.

ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸಿಮೀತವಾಗಬಾರದು ಎಲ್ಲಾ ರಂಗದಲ್ಲೂ ತೊಡಗಿಕೊಂಡು ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಮಂದ್ರಿರ ಮೋಹನ್ದಾಸ್ ಗ್ಯಾರಂಟಿ ಯೋಜನೆಗಳ ಸಮಿತಿಯ ಮಡಿಕೇರಿ ತಾಲ್ಲೂಕು ಅಧ್ಯಕ್ಷ.

ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಮತ್ತು ಮಹಿಳೆಯರನ್ನು ಪ್ರತಿಯೊಬ್ಬರು ಗೌರವಿಸಬೇಕು
ಪಿ.ಕಲಾವತಿ ಮಡಿಕೇರಿ ನಗರಸಭೆ ಅಧ್ಯಕ್ಷೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.