ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡಮಕ್ಕಿಯಲ್ಲಿ ಅಯ್ಯಪ್ಪ ಉತ್ಸವ

Published 12 ಡಿಸೆಂಬರ್ 2023, 6:34 IST
Last Updated 12 ಡಿಸೆಂಬರ್ 2023, 6:34 IST
ಅಕ್ಷರ ಗಾತ್ರ

ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದಲ್ಲಿ ಎಡಮಕ್ಕಿಯ ಅಯ್ಯಪ್ಪ ಸ್ವಾಮಿ ದೇವರ ವಾರ್ಷಿಕ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ಭಾನುವಾರ ನಡೆಯಿತು.

ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಗಣಪತಿ ಹೋಮ, ಧ್ವಜಾರೋಹಣ ನಡೆದ ಬಳಿಕ ಮಹಾಪೂಜೆ ನಡೆಯಿತು. ಮಧ್ಯಾಹ್ನ ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಅನ್ನದಾನ ನಡೆಯಿತು.

ಸಂಜೆ ದೀಪಾರಾಧನೆ ಹಾಗೂ ಎಡಮಕ್ಕಿ ಸಾರ್ವಜನಿಕ ಮೈದಾನದಿಂದ ತಾಲಪ್ಪೊಲಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು. ರಾತ್ರಿ ಮಾನಂದವಾಡಿ ಭಗವತಿ ಚಂಡೆ ವಾದ್ಯಮ್ ತಂಡದಿಂದ ಸೇವೆ ನಡೆದು, ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆದವು. ಸ್ಥಳೀಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ರಾತ್ರಿ ಸಿಡಿಮದ್ದಿನ ಪ್ರದರ್ಶನ ನಡೆಯಿತು. ಉತ್ಸವದಲ್ಲಿ ಕೊಡಗು ಜಿಲ್ಲೆ, ಕೇರಳ, ತಮಿಳುನಾಡಿನ ಭಕ್ತರು ಭಾಗವಹಿಸಿದ್ದರು.
ಪೂಜಾ ಕಾರ್ಯಕ್ರಮಗಳ ನೇತೃತ್ವವನ್ನು ದೇವಸ್ಥಾನದ ಮುಖ್ಯ ತಂತ್ರಿಗಳಾದ ಬ್ರಹ್ಮಶ್ರೀ ಮುಳ್ಳಪಲ್ಲಿ ಕೃಷ್ಣನ್ ನಂಬೂದಿರಿ ಮತ್ತು ದೇವಸ್ಥಾನದ ಪ್ರಧಾನ ಅರ್ಚಕ ವೇಣುಗೋಪಾಲ್ ಭಟ್ ವಹಿಸಿದ್ದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಿದ್ದರು.

ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದಲ್ಲಿ ಎಡಮಕ್ಕಿಯ ಅಯ್ಯಪ್ಪ ಸ್ವಾಮಿ ದೇವರ ವಾರ್ಷಿಕ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ಭಾನುವಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT