ಮಡಿಕೇರಿ: ಅಲ್ಲಾರಂಡ ವಿಠಲ ನಂಜಪ್ಪ ಅವರ ‘ಬಹುರೂಪಿ’ ಪುಸ್ತಕ ಬಿಡುಗಡೆ ಸಮಾರಂಭವು ಫೆ. 5ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಲಿದೆ.

‘ಅಲ್ಲಾರಂಡ ರಂಗಚಾವಡಿ, ಸಿರಿಗನ್ನಡ ವೇದಿಕೆ ಹಾಗೂ ‘ಚಕೋರ ಕೊಡಗು’ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುವ ಈ ಕಾರ್ಯಕ್ರಮವನ್ನು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಜೆಸಿಐ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್.ನರೇನ್ ಕಾರ್ಯಪ್ಪ ಭಾಗವಹಿಸಲಿದ್ದಾರೆ’ ಎಂದು ಲೇಖಕ ಅಲ್ಲಾರಂಡ ವಿಠಲ ನಂಜಪ್ಪ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಮನೆಯಪಂಡ ಎ.ಪೊನ್ನಪ್ಪ ವಹಿಸಲಿದ್ದಾರೆ. ಪುಸ್ತಕ ಕುರಿತು ವಕೀಲರಾದ ಬಿ.ಆರ್.ರಂಗಸ್ವಾಮಿ, ಮಂಗಳೂರು ವಿಶ್ವವಿದ್ಯಾಲಯದ ಪ್ರೊ.ಟಿ.ರಂಗಪ್ಪ ಮಾತನಾಡಲಿದ್ದಾರೆ ಎಂದರು.

ಶಿಕ್ಷಣ ತಜ್ಞರಾದ ಕಲ್ಲುಮಾಡಂಡ ಸರಸ್ವತಿ, ಕೊಡವ ತಕ್ ಎಳ್ತ್ಕಾರಡ ಕೂಟದ ಸ್ಥಾಪಕ ಅಧ್ಯಕ್ಷ ಚೆಂಬಾಂಡ ಶಿವಿ ಭೀಮಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕೃಷ್ಣ ಕಂಪ್ಯೂಟರ್ಸ್ನ ಉಣ್ಣಿಕೃಷ್ಣ ಅವರನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.

ಈ ಕಾರ್ಯಕ್ರಮ ನಡೆಯುವ ಸುದ್ದಿ ತಿಳಿದು ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಇಂಗಿತ ವ್ಯಕ್ತಪಡಿಸಿದರು ಎಂದರು.

ಒಟ್ಟು 300 ಪುಟಗಳ ಈ ಕೃತಿಯಲ್ಲಿ 56 ಲೇಖನಗಳಿವೆ. ಹಿರಿಯ ಸಾಹಿತಿ ಓ.ಎಲ್.ನಾಗಭೂಷಣಸ್ವಾಮಿ ಅವರು ಬೆನ್ನುಡಿ ಬರೆದಿದ್ದು, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ವಿಜಯ್ ಪೂಣಚ್ಚ ತಂಬಂಡ ಅವರು ಮುನ್ನುಡಿ ಬರೆದಿದ್ದಾರೆ. ಅನಾದಿ ಕಾಲದ ಕಲೆ ‘ಬೊವೊ ಆರ್ಟ್’ ಈ ಪುಸ್ತಕದ ಹಲವು ಪುಟಗಳಲ್ಲಿರುವುದು ವಿಶೇಷ. ಬೇರೆ ಬೇರೆ ಕಾಲದಲ್ಲಿ ಬರೆದ ಲೇಖನಗಳು ಈ ಪುಸ್ತಕದಲ್ಲಿವೆ ಎಂದು ಮಾಹಿತಿ ನೀಡಿದರು.

ಮಾಜಿ ಸೈನಿಕರ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಗಿರಿಜನ ಸಹಕಾರ ಸಂಘದ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಮಿಟ್ಟು ರಂಜಿತ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.