ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಡಗು ಜಿಲ್ಲೆಯಲ್ಲಿ ಶ್ರದ್ದಾ, ಭಕ್ತಿಯಿಂದ ಬಕ್ರೀದ್ ಆಚರಣೆ

Published 17 ಜೂನ್ 2024, 6:18 IST
Last Updated 17 ಜೂನ್ 2024, 6:18 IST
ಅಕ್ಷರ ಗಾತ್ರ

ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಮುಸ್ಲಿಮರು ಸೋಮವಾರ ಶ್ರದ್ದಾ ಭಕ್ತಿಯಿಂದ ಬಕ್ರೀದ್ ಆಚರಿಸಿದರು.

ಮಳೆಯ ಕಾರಣಕ್ಕೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ನಡೆಸಲಿಲ್ಲ. ಆದರೆ ಎಲ್ಲ ಮಸೀದಿಗಳಲ್ಲೂ ಬೆಳಿಗ್ಗೆಯಿಂದಲೇ ವಿಶೇಷ ಪ್ರಾರ್ಥನೆಗಳು ನಡೆದವು.

ಬಡವರಿಗೆ ಕುರಿ ಮಾಂಸವನ್ನು ಹಂಚಿದರು. ಮಕ್ಕಳು ಹೊಸಬಟ್ಟೆ ತೊಟ್ಟು ಸಂಭ್ರಮಿಸಿದರು.

ಗಡಿಭಾಗದಲ್ಲಿ ಆಚರಣೆ

ಕೊಡಗಿನ ಗಡಿಭಾಗವಾದ ಪೇರಡ್ಕ ಮೋಹಿದ್ದಿನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಮಹತ್ವ ಬಗ್ಗೆ ಸಮಾಜದಲ್ಲಿ ಮತ್ತು ಊರಿನಲ್ಲಿ ಸಹಬಾಳ್ವೆ ಅಗತ್ಯದ ಬಗ್ಗೆ ಖತೀಬ್ ನಹೀಮ್ ಫೈಜಿ ಮಾತನಾಡಿದರು‌.

ದೇಶದ ಜನರ ಒಳಿತಿಗೆ, ಅಭಿವೃದ್ಫಿ, ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು. ಎಲ್ಲರು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿ ಖಬರಸ್ಥಾನದಲ್ಲಿ ಮತ್ತು ಪೇರಡ್ಕ ಗೂನಡ್ಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.

ಜುಮಾ ಮಸ್ಜಿದ್ ಪೇರಡ್ಕ ಗೂನಡ್ಕ ಸಂಪಾಜೆ ಅಧ್ಯಕ್ಷರಾದ ಮೋಹಿದ್ದಿನ್, ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗು ಎಂ ಆರ್ ಡಿ ಎ ಅಧ್ಯಕ್ಷ ಜಿ ಕೆ ಹಮೀದ್ ಗೂನಡ್ಕ, ಟಿ ಬಿ ಹನೀಫ್ ತೆಕ್ಕಿಲ್ ಪಿ ಕೆ ಉಮ್ಮರ್ , ಮೊಹಮ್ಮದ್ ಕುಂಞಿ ತೆಕ್ಕಿಲ್ ಪೇರಡ್ಕ , ಜಮಾತಿನ ಊರಿನ ಹಲವು ಮಂದಿ ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT