ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವನಹಳ್ಳಿ: ಮೊರಾರ್ಜಿ ಶಾಲೆಗೆ ಗ್ರೀನ್ ಅವಾರ್ಡ್

Published : 12 ಆಗಸ್ಟ್ 2024, 5:13 IST
Last Updated : 12 ಆಗಸ್ಟ್ 2024, 5:13 IST
ಫಾಲೋ ಮಾಡಿ
Comments

ಕುಶಾಲನಗರ: ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗ್ರೀನ್ ಅವಾರ್ಡ್ ಪ್ರಶಸ್ತಿ ಲಭಿಸಿದೆ.

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಬಸವನಹಳ್ಳಿ ಗಿರಿಜನರ ಹಾಡಿಗೆ ಹೊಂದಿಕೊಂಡಂತೆ ಇರುವ ಸುಮಾರು 10 ಎಕರೆ ವಿಶಾಲ ಪ್ರದೇಶದಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಆರಂಭವಾದ ಈ ವಸತಿ ಶಾಲೆಯಲ್ಲಿ ಗ್ರಾಮೀಣ ಪ್ರದೇಶಗಳ ಸಾವಿರಾರು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಂಡಿದ್ದಾರೆ.

‘ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಶಾಲಾ ಪರಿಸರದಲ್ಲಿ ನೂರಾರು ಸಂಖ್ಯೆಯ ಪರಿಸರ ಸ್ನೇಹಿ ಗಿಡ ನೆಟ್ಟು ಪೋಷಿಸಿ ಮರಗಳನ್ನಾಗಿಸಿರುವುದು ಹಾಗೂ ಶಾಲೆಯ ಸ್ವಚ್ಛತೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಲಿಕೆ, ಪ್ರಾಂಶುಪಾಲರು ಹಾಗೂ ಬೋಧಕರಲ್ಲಿ ಅತ್ಯುತ್ತಮ ಹೊಂದಾಣಿಕೆ ಸೇರಿದಂತೆ ವಿವಿಧ ಆಯಾಮಗಳನ್ನು ಪರಿಶೋಧಿಸಿ ಗ್ರೀನ್ ಅಂಡ್ ಗ್ರೀನ್ ಅವಾರ್ಡ್ ನೀಡಲಾಗುತ್ತಿದೆ’ ಎಂದು ಗ್ರೀನ್ ಅಂಡ್ ಗ್ರೀನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಚ್ಚಿದಾನಂದ ಜಮದಗ್ನಿ ತಿಳಿಸಿದರು.

ಇದೇ ಸಂದರ್ಭ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೂ ಮುನ್ನಾ ಗ್ರೀನ್ ಅಂಡ್ ಗ್ರೀನ್ ಸಂಸ್ಥೆ ಹಾಗೂ ಶಾಲಾ ಪರಿಸರದಲ್ಲಿ ಮತ್ತೆ 150 ಗಿಡಗಳನ್ನು ನೆಡಲಾಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಎಸ್.ಎಸ್.ಶ್ರೀದೇವಿ ಪ್ರಶಸ್ತಿ ಸ್ವೀಕರಿಸಿದರು.

ಸಂಸ್ಥೆಗೆ ಸಿಕ್ಕಿರುವ ಬಹುಮಾನದ ಹಿಂದೆ ಹಿಂದಿನ ಪ್ರಾಂಶುಪಾಲರಾದ ಕೆ.ವಿ.ಸುರೇಶ್ ಹಾಗೂ ಚಂದ್ರಶೇಖರರೆಡ್ಡಿ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರ ಶ್ರಮವನ್ನು ಸ್ಮರಿಸಲಾಗುತ್ತಿದೆ ಎಂದು ಶ್ರೀದೇವಿ ಹೇಳಿದರು.

ಕಾರ್ಯಕ್ರಮದಲ್ಲಿ ಗ್ರೀನ್ ಅಂಡ್ ಗ್ರೀನ್ ಸಂಸ್ಥೆಯ ರಾಜ್ಯ ಸಂಯೋಜಕರಾದ ಕೆ.ಆರ್.ರಮೇಶ್, ಪುಟ್ಟರಾಜು, ಜಗದೀಶ್ ಇದ್ದರು.ಉಪನ್ಯಾಸಕ ಶಿವಕುಮಾರ್ ಸ್ವಾಗತಿಸಿದರು.ಶಿಕ್ಷಕ ಗಿರೀಶ್ ವಂದಿಸಿದರು. ರಮೇಶ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT