ರೇಬೀಸ್ ಹರಡದಂತೆ ಎಚ್ಚರಿಕೆ ವಹಿಸಿ’

7

ರೇಬೀಸ್ ಹರಡದಂತೆ ಎಚ್ಚರಿಕೆ ವಹಿಸಿ’

Published:
Updated:
Deccan Herald

ಮಡಿಕೇರಿ: ‘ಹುಚ್ಚುನಾಯಿ ಕಡಿತದಿಂದ ಉಂಟಾಗುವ ರೇಬೀಸ್ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ’ ಎಂದು ಡಿವೈಎಸ್‌ಪಿ ಸುಂದರರಾಜ್ ತಿಳಿಸಿದರು.

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ನಡೆದ ರೇಬೀಸ್ ರೋಗ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.

‘ರೋಗ ಹರಡದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಸಾಕು ನಾಯಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು’ ಎಂದು ತಿಳಿಸಿದರು.

ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಎ.ಬಿ. ತಮ್ಮಯ್ಯ ಮಾತನಾಡಿ, ಸಾಕು ನಾಯಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮವು ಆರಂಭವಾಗಿದ್ದು, ಸೋಮವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರ ವರೆಗೆ ನಗರದ ಜಿಲ್ಲಾ ಪಶು ಆಸ್ಪತ್ರೆ (ಪಾಲಿಕ್ಲಿನಿಕ್) ಆವರಣದಲ್ಲಿ ಉಚಿತ ಲಸಿಕೆ ಹಾಕಲಾಗುವುದು ಎಂದು ಮಾಹಿತಿ ನೀಡಿದರು.

ರೇಬೀಸ್ ಸೋಂಕು ತಗುಲಿದರೆ ಚಿಕಿತ್ಸೆ ಇರುವುದಿಲ್ಲ. ಆದ್ದರಿಂದ, ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ತಮ್ಮಯ್ಯ ಎಚ್ಚರಿಸಿದರು.

ಅರಂತೋಡು ಪಶು ವೈದ್ಯಾಧಿಕಾರಿ ಡಾ.ನಿತಿನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗುಪ್ತಾಜೀ, ಡಾ.ಚಿದಾನಂದ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !