ಗೋಣಿಕೊಪ್ಪಲು: ಬಾಳೆಲೆ ಸಮೀಪದ ಜಾಗಲೆಯ ಕಾರ್ಮಿಕ ಕುಳ್ಳ ಎಂಬವರ ಮೇಲೆ ಕರಡಿ ಮಂಗಳವಾರ ರಾತ್ರಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊನ್ನಂಪೇಟೆ ತಾಲ್ಲೂಕು ಜಾಗಲೆ ನಿಟ್ಟೂರು ಗ್ರಾಮದ ಆಳಮೇಂಗಡ ಬಿದ್ದಪ್ಪ ಎಂಬುವರ ತೋಟದ ಲೈನ್ ಮನೆಯಲ್ಲಿ ವಾಸಿಸುತ್ತಿದ್ದ ಕುಳ್ಳ (30) ಮಂಗಳವಾರ ರಾತ್ರಿ 11 ಗಂಟೆ ವೇಳೆಯಲ್ಲಿ ಲೈನ್ ಮನೆಯಿಂದ ಹೊರಗೆ ಬಂದಾಗ ಕರಡಿ ದಾಳಿ ನಡೆಸಿದ್ದರಿಂದ ಕಣ್ಣು ಹಾಗೂ ಹಣೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದೆ.

ಗಾಯಾಳುವನ್ನು ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಮೈಸೂರಿಗೆ ರವಾನಿಸಲಾಯಿತು. ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಸಂಪೂರ್ಣ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.