ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರೀಡಾಕೂಟದಿಂದ ಸ್ಥಳೀಯರಿಗೆ ಅನುಕೂಲ: ಶಾಸಕ ಡಾ.ಮಂತರ್ ಗೌಡ

ಕ್ರೀಡಾಕೂಟದ ಸಮಾರೋಪ ಸಮಾರಂಭ
Published 29 ಜನವರಿ 2024, 7:52 IST
Last Updated 29 ಜನವರಿ 2024, 7:52 IST
ಅಕ್ಷರ ಗಾತ್ರ

ಸೋಮವಾರಪೇಟೆ: ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಕ್ರೀಡಾಕೂಟ ಆಯೋಜಿಸುವುದರಿಂದ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚು ಅನುಕೂಲವಾಗಲಿದ್ದು, ಸ್ಥಳೀಯ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ತಾಲ್ಲೂಕಿನ ಕುಸುಬೂರು-ಕೆಂಚಮ್ಮನಬಾಣೆ ಭಾರತ್ ಮಾತಾ ಸೇವಾ ಸಂಘದಿಂದ ಶನಿವಾರ ಸಂಜೆ ಆಯೋಜಿಸಿದ್ದ ಗ್ರಾಮೀಣ ಕ್ರೀಡಾಕೂಟದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕ್ರೀಡಾ ಚಟುಟಿಕೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವಿಕಸನಗೊಳ್ಳಲು ಸಾಧ್ಯ. ಕ್ರೀಡಾ ಕ್ಷೇತ್ರವೂ ಹೆಚ್ಚಿನವರಿಗೆ ಜೀವನ ಕಲ್ಪಿಸಿಕೊಟ್ಟಿದ್ದು, ಗ್ರಾಮೀಣ ಭಾಗದ ಕ್ರೀಡಾಪ್ರತಿಭೆಗಳನ್ನು ಇಂತಹ ಕ್ರೀಡಾಕೂಟಗಳಲ್ಲಿ ಗುರುತಿಸಿ ಪ್ರೋತ್ಸಾಹ ನೀಡಬೇಕು. ಕ್ರೀಡೆಯಲ್ಲಿ ಆಸಕ್ತಿ ಇರುವ ಯುವಕರು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬಹುದು. ಸಂಘ ಕಳೆದ ಮೂವತ್ತು ವರ್ಷಗಳಿಂದ ಕ್ರೀಡಾಕೂಟ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ. ಕೆಂಚಮ್ಮನ ಬಾಣೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಾಗೂ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ₹5ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಸೇವಾಸಂಘದ ಅಧ್ಯಕ್ಷ ಕೆ.ಜೆ.ಸುನಿಲ್ ಮಾತನಾಡಿ, ರಸ್ತೆ ಹಾಗೂ ರಂಗಮಂದಿರ ಕಾಮಗಾರಿಗೆ ಅನುದಾನ ಕಲ್ಪಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಗ್ರಾಮೀಣಭಿವೃದ್ದಿಗೆ ಸೇವಾ ಸಂಘ ಹೆಚ್ಚಿನ ಪಾತ್ರ ವಹಿಸಿದೆ. ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗ್ರಾಮದ ಕೆ.ಪಿ.ಸುದರ್ಶನ್(ರಾಜಕೀಯ ಕ್ಷೇತ್ರ), ಬಿ.ಎ.ಯೋಗೇಶ್(ಉದ್ದಿಮೆ), ವಿ.ಜಿ.ವಿಕೇಶ್(ಆರೋಗ್ಯ), ಬಿ.ಎಸ್.ಭರತ್(ಉದ್ದಿಮೆ), ಜೋಸ್ಮಿತಾ ಪ್ರಮಿತ್(ನ್ಯಾಯಾಂಗ), ಬಿ.ಎಸ್.ಆನಂದ್(ರಾಜಕೀಯ) ಅವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಗ್ರಾಮದ ಬಲಮುರಿ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ.ಸೋಮಶೇಖರ್,  ಬಿ.ಸಿ.ಪೂಣಚ್ಚ, ಹಾಲಿ ಉಪಾಧ್ಯಕ್ಷ ಕೆ.ಜಿ.ವಿಜಯಕುಮಾರ್, ಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಬಿ.ಎ.ಭಾಸ್ಕರ್, ಪ್ರಮುಖರಾದ ಬಿ.ಬಿ.ಸತೀಶ್, ಮಿಥುನ್ ಹಾನಗಲ್, ಚೇತನ್, ಕೆ.ಪಿ.ಉಲ್ಲಾಸ್, ಅರುಣ್ ಕಾಳಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT