ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತ್ಯೇಕ ಪ್ರಕರಣ; ಬೀಟೆ ನಾಟಾ, ಹರಳು ಕಲ್ಲು ವಶ

ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಮೂವರ ಬಂಧನ
Published 12 ಜೂನ್ 2024, 6:09 IST
Last Updated 12 ಜೂನ್ 2024, 6:09 IST
ಅಕ್ಷರ ಗಾತ್ರ

ಕುಶಾಲನಗರ: ಕುಶಾಲನಗರ ಕಡೆಯಿಂದ ಹುಣಸೂರು ಕಡೆಗೆ ಪಿಕ್ ಆಪ್ ವಾಹನದಲ್ಲಿ ಅಕ್ರಮವಾಗಿ ಹರಳು ಕಲ್ಲು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಿನೀಮಿಯ ರೀತಿಯಲ್ಲಿ ಬೆನ್ನಟ್ಟಿ ಮೂವರನ್ನು ಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳ ತಂಡ 2,495 ಕೆಜಿ ಹರಳು ಕಲ್ಲು ವಶ ಪಡಿಸಿಕೊಂಡಿದ್ದಾರೆ.

ವಾಹನ ಚಾಲಕ ಅರಣ್ಯ ತಪಾಸಣಾ ಕೇಂದ್ರದ ಸಿಬ್ಬಂದಿಗಳು ನಿಲ್ಲಿಸುವಂತೆ ಸೂಚನೆ ನೀಡಿದರೂ ವೇಗವಾಗಿ ಚಾಲನೆ ಮಾಡಿಕೊಂಡ ಹೋದಾಗ ಆರ್.ಎಫ್.ಒ. ರತನ್ ಕುಮಾರ್ ಹಿಂಬಾಲಿಸಿ ವಾಹನವನ್ನು ತಡೆದು, ಮೂವರನ್ನು ಬಂಧಿಸಿದರು.

ಅಕ್ರಮವಾಗಿ ಬೀಟೆ ನಾಟಾ ವಶ:

ಕುಶಾಲನಗರ ಕಡೆಯಿಂದ ಪಿಕ್ ಆಪ್ ವಾಹನದಲ್ಲಿ ಬೀಟೆ ನಾಟಾಗಳನ್ನು ತುಂಬಿಸಿಕೊಂಡು ಮೈಸೂರು ‌ಕಡೆಗೆ ಹೋಗುತ್ತಿದ್ದ ವಾಹನವನ್ನು ಟೋಲ್‌ಗೇಟ್ ಬಳಿಯ ಅರಣ್ಯ ತಪಾಸಣಾ ಕೇಂದ್ರದ ಸಿಬ್ಬಂದಿ ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದ ವೇಳೆ ಅಕ್ರಮವಾಗಿ ಬೀಟೆ ನಾಟಾ ಸಾಗಾಟ ಮಾಡುತ್ತಿರುವ ಪ್ರಕರಣ ಗೊತ್ತಾಯಿತು. ಈ ವೇಳೆ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾದರು. ಅರಣ್ಯ ಸಿಬ್ಬಂದಿ ವಾಹನ ಮತ್ತು ಬೀಟೆ ನಾಟಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮವಾಗಿ ಹರಳುಕಲ್ಲು ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ತಡೆದ ಅರಣ್ಯ ಸಿಬ್ಬಂದಿ ಮೂವರು ಆರೋಪಿಗಳನ್ನು ಬಂಧಿಸಿ ಹರಳು ಕಲ್ಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಹರಳುಕಲ್ಲು ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ತಡೆದ ಅರಣ್ಯ ಸಿಬ್ಬಂದಿ ಮೂವರು ಆರೋಪಿಗಳನ್ನು ಬಂಧಿಸಿ ಹರಳು ಕಲ್ಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT