ತಲಕಾವೇರಿ (ಮಡಿಕೇರಿ): ಬ್ರಹ್ಮಗಿರಿಯ ಬೆಟ್ಟ ಕುಸಿತದ ಸ್ಥಳದಲ್ಲಿ ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರಿಗೆ ಸೇರಿದ ಡಸ್ಟರ್ ಹಾಗೂ ಓಮ್ನಿ ಕಾರು ಮಂಗಳವಾರದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಎರಡು ಕಾರುಗಳೂ ಸಂಪೂರ್ಣ ನಜ್ಜುಗುಜ್ಜಾಗಿವೆ. ಮಣ್ಣಿನ ಅಡಿ ಹುದುಗಿದ್ದ ಕಾರುಗಳನ್ನು ಹಿಟಾಚಿ ಯಂತ್ರದ ಮೂಲಕ ಹೊರ ತೆಗೆಯಲಾಯಿತು.

ಅರ್ಚಕ ಕುಟುಂಬದ ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಸ್ಥಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಕೆ.ಜಿ.ಬೋಪಯ್ಯ ಹಾಜರಿದ್ದರು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

‘ಯಾವ ಕಾರಣಕ್ಕೂ ಕಾರ್ಯಾಚರಣೆ ಸ್ಥಗಿತ ಮಾಡುವುದಿಲ್ಲ. ನಮ್ಮ ಪ್ರಯತ್ನ ಮುಂದುವರಿಯಲಿದೆ’ ಎಂದು ಸಚಿವ ಸೋಮಣ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.