ಭಾಗಮಂಡಲ–ಅಯ್ಯಂಗೇರಿ ಸಂಪರ್ಕ ಕಡಿತ

7

ಭಾಗಮಂಡಲ–ಅಯ್ಯಂಗೇರಿ ಸಂಪರ್ಕ ಕಡಿತ

Published:
Updated:
Deccan Herald

ನಾಪೋಕ್ಲು: ನಾಪೋಕ್ಲು ಹಾಗೂ ಭಾಗಮಂಡಲ ವ್ಯಾಪ್ತಿಯ ಗ್ರಾಮಗಳಲ್ಲಿ ಸೋಮವಾರ ಬೆಳಿಗ್ಗಿನಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ.

ಧಾರಾಕಾರ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನಾಪೊಕ್ಲು-ಭಾಗಮಂಡಲ ಸಂಪರ್ಕ ರಸ್ತೆ ಜಲಾವೃತವಾಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ಭಾನುವಾರ ರಾತ್ರಿಯಿಂದಲೇ ಬಿರುಸಿನ ಮಳೆ ಸುರಿದಿದೆ. ಈ ವ್ಯಾಪ್ತಿಯ ನದಿ, ಹೊಳೆ, ಹಳ್ಳಕೊಳ್ಳ, ತೋಡುಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

ಸಮೀಪದ ಕೊಟ್ಟಮುಡಿಯಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಬಿರುಸಿನ ಮಳೆ ಮುಂದುವರಿಯುತ್ತಿದ್ದು, ನಾಪೋಕ್ಲು - ಮೂರ್ನಾಡು ಸಂಪರ್ಕ ರಸ್ತೆ ಜಲಾವೃತವಾಗಿ ಕಡಿತಗೊಳ್ಳುವ ಆತಂಕವಿದೆ.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !